ADVERTISEMENT

ಕೆರೆ ದುರಸ್ತಿಗೆ ಮುಂದಾದ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 3:08 IST
Last Updated 16 ಅಕ್ಟೋಬರ್ 2021, 3:08 IST
ಶಿಡ್ಲಘಟ್ಟ ತಾಲ್ಲೂಕಿನ ಚೊಕ್ಕನಹಳ್ಳಿಯಲ್ಲಿ ಕೆರೆಯಲ್ಲಿ ನೀರು ಸಂರಕ್ಷಣೆ ಮಾಡುವ ಕಾರ್ಯವನ್ನು ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಕೈಗೆತ್ತಿಕೊಂಡಿರುವುದು
ಶಿಡ್ಲಘಟ್ಟ ತಾಲ್ಲೂಕಿನ ಚೊಕ್ಕನಹಳ್ಳಿಯಲ್ಲಿ ಕೆರೆಯಲ್ಲಿ ನೀರು ಸಂರಕ್ಷಣೆ ಮಾಡುವ ಕಾರ್ಯವನ್ನು ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಕೈಗೆತ್ತಿಕೊಂಡಿರುವುದು   

ಶಿಡ್ಲಘಟ್ಟ: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಪಂಚಾಯತ್‍ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ ಸೇರಿದ ಮೂರು ಕೆರೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಕೆರೆಯಲ್ಲಿರುವ ನೀರು ಪೋಲಾಗದಂತೆ ಮರಳುತುಂಬಿದ ಮೂಟೆಗಳನ್ನು ಇಡುವ ಕೆಲಸ ಆರಂಭಿಸಲಾಗಿದೆ.

ಗಂಜಿಗುಂಟೆ ಗ್ರಾಮ ಪಂಚಾಯಿತಿಯ ಚೊಕ್ಕನಹಳ್ಳಿಯಲ್ಲಿ ಕೆರೆಕಟ್ಟೆ ಒಡೆದು ವ್ಯರ್ಥವಾಗಿ ಹರಿಯುತ್ತಿರುವ ನೀರನ್ನು ತಡೆಯೊಡ್ಡಲು ಮರಳು ತುಂಬಿದ ಮೂಟೆಗಳನ್ನು ಇಡುವ ಕೆಲಸ ಮಾಡಲಾಗುತ್ತಿದೆ. ಪಂಚಾಯತ್‍ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕೃಷ್ಣಪ್ಪ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಎಇಇ ರಮೇಶ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾಮಗಾರಿಯನ್ನು ಕಂಡು ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆ ಬಿದ್ದ ಸಂದರ್ಭದಲ್ಲಿ ಕೆರೆಗಳ ಕಟ್ಟೆ ಒಡೆದು ನೀರು ಮಣ್ಣುಪಾಲು ಆಗುವುದು ಸಾಮಾನ್ಯವಾಗಿದೆ. ಈಗಾಗಲೇ ಈ ಭಾಗದಲ್ಲಿ ಅಂತರ್ಜಲಮಟ್ಟ ಕುಸಿದು ತೊಂದರೆ ಅನುಭವಿಸುತ್ತಿದ್ದರೂ ಅಧಿಕಾರಿಗಳು ಕೇವಲ ಮಳೆ ನೀರು ಸಂರಕ್ಷಣೆ ಮಾಡುವ ನೆಪದಲ್ಲಿ ಕೆಲವೊಂದು ಕಾಮಗಾರಿಗಳನ್ನು ನಡೆಸಿ ಕೈತೊಳೆದುಕೊಳ್ಳುವ ಸಂಪ್ರದಾಯ ರೂಢಿಸಿಕೊಂಡಿದ್ದಾರೆ. ಕೂಡಲೇ ಶಾಶ್ವತವಾದ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.