ADVERTISEMENT

ಚಿಕ್ಕಬಳ್ಳಾಪುರದಲ್ಲಿ ಇಂದು 13 ಮಂದಿಗೆ ಕೊರೊನಾ ವೈರಸ್‌ ಸೋಂಕು, ವೃದ್ದೆಯ ಸಾವು

ಜಿಲ್ಲೆಯಲ್ಲಿ ಭಾನುವಾರ 13 ಕೋವಿಡ್ ಪ್ರಕರಣಗಳು ವರದಿ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 14:18 IST
Last Updated 5 ಜುಲೈ 2020, 14:18 IST
ಜಿಲ್ಲಾಧಿಕಾರಿ ಆರ್.ಲತಾ ಅವರು ವಿವಿಧ ಕ್ವಾರಂಟೈನ್‌ ಕೇಂದ್ರಗಳಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಆರ್.ಲತಾ ಅವರು ವಿವಿಧ ಕ್ವಾರಂಟೈನ್‌ ಕೇಂದ್ರಗಳಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಕೋವಿಡ್ ಸೋಂಕಿತ ಗೌರಿಬಿದನೂರಿನ ತಾಲ್ಲೂಕಿನ ವೃದ್ಧೆಯೊಬ್ಬರು ಮೃತಪಟ್ಟಿದ್ದು, 13 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿದೆ.

ಶನಿವಾರ ಗೌರಿಬಿದನೂರು ತಾಲ್ಲೂಕಿನ ಹಿರೇಬಿದನೂರಿನ ಮೂರು ಜನರಲ್ಲಿ ಕೋವಿಡ್‌ ಪತ್ತೆಯಾಗಿತ್ತು. ಆ ಪೈಕಿ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ.

ಇನ್ನೊಂದೆಡೆ ಚಿಂತಾಮಣಿ ತಾಲ್ಲೂಕಿನಲ್ಲಿ ಭಾನುವಾರ ಆರು ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಬಹುತೇಕರು ಸರ್ಕಾರಿ ಆಸ್ಪತ್ರೆಯ ಸೋಂಕಿತ ವೈದ್ಯೆಯ ಸಂಪರ್ಕಕ್ಕೆ ಬಂದ ಕುಟುಂಬದ ಸದಸ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಆರು, ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಒಂದು ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 60, ಬಾಗೇಪಲ್ಲಿ 54, ಚಿಂತಾಮಣಿ 27, ಗೌರಿಬಿದನೂರು 100, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 17 ಜನರಿಗೆ ಕೋವಿಡ್ ಸೋಂಕು ತಗುಲಿದೆ.

ಸೋಂಕಿತರ ಪೈಕಿ ಐದು ಮಂದಿ ಕೋವಿಡ್‌ನಿಂದ, ಮೂರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ಧಾರೆ. ಚಿಕಿತ್ಸೆಯಿಂದ 184 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ವಾರ್ಡ್‌ನಲ್ಲಿ 66 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.