ADVERTISEMENT

ಡಿಪ್ಲೊಮಾ ತರಗತಿಗಳ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2019, 14:14 IST
Last Updated 17 ಸೆಪ್ಟೆಂಬರ್ 2019, 14:14 IST
ಶೈಕ್ಷಣಿಕವಾಗಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡಿದ 35 ವಿದ್ಯಾರ್ಥಿಗಳನ್ನು ಮತ್ತು ಶೇ 100ರಷ್ಟು ಫಲಿತಾಂಶಕ್ಕೆ ಕಾರಣರಾದ 26 ಶಿಕ್ಷಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಶೈಕ್ಷಣಿಕವಾಗಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡಿದ 35 ವಿದ್ಯಾರ್ಥಿಗಳನ್ನು ಮತ್ತು ಶೇ 100ರಷ್ಟು ಫಲಿತಾಂಶಕ್ಕೆ ಕಾರಣರಾದ 26 ಶಿಕ್ಷಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.   

ಚಿಕ್ಕಬಳ್ಳಾಪುರ: ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಂಗಳವಾರ ಪ್ರಥಮ ವರ್ಷದ ಡಿಪ್ಲೊಮಾ ತರಗತಿಗಳ ಉದ್ಘಾಟನಾ ಸಮಾರಂಭ ನಡೆಯಿತು.


ಕಾರ್ಯಕ್ರಮದಲ್ಲಿ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಡಿಪ್ಲೊಮಾ ಶಿಕ್ಷಣದಿಂದ ಜೀವನದ ಉತ್ತುಂಗ ಸ್ಥಿತಿ ತಲುಪುವ ಮಾರ್ಗದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ಬಿಜಿಎಸ್‌ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ ಮಾತನಾಡಿ ಬಿಜಿಎಸ್ ಕಾಲೇಜು ಶೈಕ್ಷಣಿಕವಾಗಿ ಮುನ್ನೆಡೆಯುತ್ತಿರುವ ಹಾದಿ ಹಾಗು ಹೆಚ್ಚು ಫಲಿತಾಂಶವನ್ನು ಪಡೆಯುತ್ತಿರುವ ಬಗ್ಗೆ ವಿವರಿಸಿ, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹಿತವಚನ ಹೇಳಿದರು.

ADVERTISEMENT


ಆದಿಚುಂಚನಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಆರ್.ಲತಾ, ಉಪ ವಿಭಾಗಾಧಿಕಾರಿ ರಘುನಂದನ್, ಎಸ್‌ಜೆಸಿಐಟಿ ಪ್ರಾಂಶುಪಾಲ ರವಿಕುಮಾರ್, ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರೋ. ಪಿ.ಸಿ.ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.