ADVERTISEMENT

ಗುಡಿಬಂಡೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2022, 2:52 IST
Last Updated 11 ಫೆಬ್ರುವರಿ 2022, 2:52 IST

ಗುಡಿಬಂಡೆ: ಪಟ್ಟಣದ ವ್ಯಾಪ್ತಿಯಲ್ಲಿ ಮ್ಯಾನುಯಲ್ ಸ್ಯ್ಕಾವೆಂಜಿಂಗ್ ಕೆಲಸ ಮಾಡುವ ವ್ಯಕ್ತಿಗಳನ್ನು ಗುರುತಿಸಲು ಸಮೀಕ್ಷಾ ಶಿಬಿರ ಆಯೋಜಿಸಲಾಗಿದೆ.

ಕಳೆದ ಡಿ. 18ವರೆಗೆಮ್ಯಾನುಯಲ್ ಸ್ಯ್ಕಾವೆಂಜಿಂಗ್ ಕೆಲಸ ಮಾಡುವವರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಇದುವರೆಗೆ ಯಾರೊಬ್ಬರು ಅರ್ಜಿ ಸಲ್ಲಿಸಿಲ್ಲ. ಈ ಕುರಿತು ಏನಾದರೂ ಆಕ್ಷೇಪಣೆ ಇದ್ದರೆ ಅಗತ್ಯ ದಾಖಲೆಗಳೊಂದಿಗೆ ಫೆ. 14 ರೊಳಗೆ ಕಚೇರಿಗೆ ಸಲ್ಲಿಸಬಹುದು ಎಂದು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ರಾಜಶೇಖರ್ ತಿಳಿಸಿದ್ದಾರೆ.

ಕೆಡಿಪಿ ಸಭೆ ಇಂದು

ADVERTISEMENT

ಗುಡಿಬಂಡೆ: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಫೆ. 11ರಂದು ಬೆಳಿಗ್ಗೆ 11ಗಂಟೆಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಲಿದೆ. ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಕೈವಾರ: ಹಸಿರು ಪದ ಗಾಯನ

ಚಿಂತಾಮಣಿ: ನಗರದ ಬೇರು ಬೆವರು ಕಲಾ ಬಳಗದಿಂದ ಫೆ. 12ರಂದು ಶನಿವಾರ ಬೆಳಿಗ್ಗೆ 10ಗಂಟೆಗೆ ಕೈವಾರದ ಶ್ರೀಯೋಗಿನಾರೇಯಣ ತಪೋವನ ಗವಿಯಲ್ಲಿ ‘ಹಸಿರು ಪದಗಳ’ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ‘ಪರಿಸರದ ಕಥೆ’ ಕುರಿತು ಚರ್ಚೆ-ಮಂಥನ ನಡೆಯಲಿದೆ. ಸಾಂಸ್ಕೃತಿಕ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ, ಕವಿ ಶಶಿರಾಜ್ ಹರತಲೆ, ಪರಿಸರವಾದಿ ಚೌಡಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.