ADVERTISEMENT

ಚಿಕ್ಕಬಳ್ಳಾಪುರ: ಆರು ದಿನ ಮೊಟ್ಟೆ ವಿತರಣೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 7:19 IST
Last Updated 20 ಜುಲೈ 2025, 7:19 IST
ಮೊಟ್ಟೆ
ಮೊಟ್ಟೆ   

ಚಿಂತಾಮಣಿ: ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಂತೆ ವಾರದ ಆರು ದಿನ ಮಕ್ಕಳಿಗೆ ಮೊಟ್ಟೆ ನೀಡಬೇಕು. ಮೊಟ್ಟೆ ಸೇವಿಸದೇ ಇರುವವರಿಗೆ ಮಾತ್ರ ಬಾಳೆಹಣ್ಣು ವಿತರಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ.

ಸರ್ಕಾರಿ ಆದೇಶ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಕೆಲವು ಶಾಲೆಗಳಲ್ಲಿ ಎಸ್‌ಡಿಎಂಸಿ ನಡವಳಿ ರೂಪಿಸಿಕೊಂಡು ತಮ್ಮಲ್ಲೇ ಬದಲಾವಣೆ ಮಾಡಿಕೊಂಡು 3 ದಿನ ಮೊಟ್ಟೆ 3 ದಿನ ಬಾಳೆಹಣ್ಣು ವಿತರಣೆ ಮಾಡುವುದು. ಇನ್ನೂ ಕೆಲವು ಶಾಲೆಗಳಲ್ಲಿ ಸೋಮವಾರ, ಶನಿವಾರ ಮೊಟ್ಟೆ ವಿತರಣೆ ಮಾಡದಿರುವುದು ಗಮನಕ್ಕೆ ಬಂದಿದೆ. ವಾರದ 6 ದಿನ ಮೊಟ್ಟೆ ನೀಡುವ ಕುರಿತು ತಾಲ್ಲೂಕಿನ ಎಲ್ಲಾ ಶಾಲೆಗಳ ಎಸ್‌ಡಿಎಂಸಿ ಸಭೆಕರೆದು ಮಾಹಿತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಅಕ್ಷರದಾಸೋಹ ಸಹಾಯಕ ನಿರ್ದೇಶಕರಿಗೆ ಆದೇಶ ನೀಡಲಾಗಿದೆ.

ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ತಮ್ಮ ವ್ಯಾಪ್ತಿಯ ಎಲ್ಲ ಶಾಲೆಗಳಿಗೂ ತಿಳಿಸಬೇಕು. ಎಲ್ಲಾ ಶಾಲೆಗಳ ಎಸ್‌ಡಿಎಂಸಿ ಸಭೆ ನಡೆಸಿ ಮಾಹಿತಿ ತಿಳಿಸಿರುವ ಕುರಿತು ವರದಿಯನ್ನು ಜಿಲ್ಲಾ ಶಿಕ್ಷಣಾಧಿಕಾರಿ ಅಕ್ಷರ ದಾಸೋಹ ವಿಭಾಗ ಜಿಲ್ಲಾ ಪಂಚಾಯಿತಿ, ಚಿಕ್ಕಬಳ್ಳಾಪುರ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.