ADVERTISEMENT

ಪದ್ಮಶ್ರೀ ಪುರಸ್ಕೃತ ಮುನಿವೆಂಕಟಪ್ಪ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 5:08 IST
Last Updated 24 ನವೆಂಬರ್ 2025, 5:08 IST
ಪದ್ಮಶ್ರೀ ಪುರಸ್ಕೃತ ಪಿಂಡಿಪಾಪನಹಳ್ಳಿಯ ತಮಟೆವಾದಕ ನಾಡೋಜ ಮುನಿವೆಂಕಟಪ್ಪ
ಪದ್ಮಶ್ರೀ ಪುರಸ್ಕೃತ ಪಿಂಡಿಪಾಪನಹಳ್ಳಿಯ ತಮಟೆವಾದಕ ನಾಡೋಜ ಮುನಿವೆಂಕಟಪ್ಪ   

ಶಿಡ್ಲಘಟ್ಟ: ಪದ್ಮಶ್ರೀ ಪುರಸ್ಕೃತ ಪಿಂಡಿಪಾಪನಹಳ್ಳಿಯ ತಮಟೆ ವಾದಕ ನಾಡೋಜ ಮುನಿವೆಂಕಟಪ್ಪ ಅವರ ಆರೋಗ್ಯ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರದಿಂದ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದೆ. ಅವರ ಮೊಮ್ಮಗ ಪ್ರಸನ್ನ ಕುಮಾರ್ ಶುಕ್ರವಾರ ಚಿಂತಾಮಣಿಯ ಡೆಕ್ಕನ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರು ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಿಸುವಂತೆ ಸೂಚಿಸಿದ್ದಾರೆ. ಅಲ್ಲಿ ವೈದ್ಯರು ಸೋಡಿಯಂ ಕಡಿಮೆ ಆಗಿರುವಂತಿದೆ. ಪಾರ್ಶ್ವವಾಯು ತಗುಲಿರುವ ಸಾಧ್ಯತೆ ಇದೆ ಎಂದು ಹೇಳಿ, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕಳಿಸಿದ್ದಾರೆ.

ಅಲ್ಲಿಯೂ ಹಲವು ಪರೀಕ್ಷೆ ಮಾಡಿ, ಇಲ್ಲಿ ಐಸಿಯು ಇಲ್ಲ, ಖಾಸಗಿ ಆಸ್ಪತ್ರೆಗೆ ಹೋಗಿ ಎಂದು ಹೇಳಿದ್ದಾರೆ. ಆನಂತರ ಅವರನ್ನು ಬೇಗೂರಿನ ಜಯಶ್ರೀ ಆಸ್ಪತ್ರೆಗೆ ಶನಿವಾರ ದಾಖಲಿಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

‘ಜಿಲ್ಲಾಧಿಕಾರಿಗೆ ಹಲವು ಬಾರಿ ಕರೆ ಮಾಡಿದೆ. ಅವರು ಕರೆ ಸ್ವೀಕರಿಸಲಿಲ್ಲ. ಅವರ ಪಿ.ಎಗೆ ಕರೆ ಮಾಡಿದೆ. ಅವರು ಮಾತನಾಡಿ ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಅವರು ಇಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಮಾತನಾಡಿದರು’ ಎಂದು ಮುನಿವೆಂಕಟಪ್ಪ ಅವರ ಮೊಮ್ಮಗ ಪ್ರಸನ್ನ ಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.