
ಪ್ರಜಾವಾಣಿ ವಾರ್ತೆ
ಚಿಂತಾಮಣಿ: ತಾಲ್ಲೂಕಿನ ಕೋಟಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಪಲ್ಲಿ ಗ್ರಾಮದ ಅಭಯ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಹನುಮನಿಗೆ ಬುಧವಾರ ಪಂಜುರ್ಲಿ ಅಲಂಕಾರ ಮಾಡಲಾಗಿತ್ತು.
ಪ್ರತಿವರ್ಷ ಹನುಮ ಜಯಂತಿ ಮಾರನೇ ದಿನ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ, ಧಾರ್ಮಿಕ ಕೈಂಕರ್ಯಗಳು ಹಾಗೂ ಪೂಜೆ ನಡೆಯುತ್ತದೆ.
ಭಕ್ತಾದಿಗಳು ಹೋಮ, ಹವನ, ಪೂಜೆ ನೆರವೇರಿಸಿದರು. ಬೆಳಿಗ್ಗೆಯಿಂದ ಸಂಜೆವರೆಗೆ ವಿವಿಧ ಪೂಜಾ ಕೈಂಕರ್ಯ ನೆರವೇರಿದವು. ಅಂಜನಿಸುತ ಫೌಂಡೇಶನ್ ಅಧ್ಯಕ್ಷ ಪ್ರದೀಪ್ ಆಂಜನೇಯ ರೆಡ್ಡಿ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.