ಚಿಂತಾಮಣಿ: ಚಿನ್ನಸಂದ್ರ ಬೈಪಾಸ್ ಬಳಿ ಅಕ್ಟೋಬರ್ 6ರಂದು ಆಯೋಜಿಸಿರುವ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಜನ್ಮ ದಿನಾಚರಣೆಯಲ್ಲಿ ಭಾಗವಹಿಸುತ್ತಿರುವ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಕಾರ್ಯಕ್ರಮಕ್ಕೆ ಪೊಲೀಸರು ಬಲವಾದ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಭಾನುವಾರ ಲಿಯೋ ಕ್ಲಬ್ ಆಪ್ ಮಾರ್ಗ್ ಮತ್ತು ಅನಿತಾ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು ಕಾರ್ಯಕ್ರಮದ ಸ್ಥಳದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕೀಲ ಗೋಪಿನಾಥ್ ಮಾತನಾಡಿ, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಾಸ್ ಇಲ್ಲದೆ ಯಾರಿಗೂ ಕಾರ್ಯಕ್ರಮಕ್ಕೆ ಪ್ರವೇಶವಿಲ್ಲ. ಸೂಕ್ತ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಲಾಗಿದೆ. ವಾಹನಗಳಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ಬರಲು ಯಾರಿಗೂ ಅವಕಾಶವಿಲ್ಲ. ವಾಹನಗಳನ್ನು ನಿಗದಿತ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ನಡೆದುಕೊಂಡು ಬರಬೇಕು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ 30 ಸಾವಿರ ಪಾಸ್ ವಿತರಿಸಲಾಗಿದೆ. ಕೊನೆಯಲ್ಲಿ ನಿಂತು ನೋಡಲು 2 ವಿಶಾಲವಾದ ಎಲ್‌ಇಡಿ ಪರದೆ ಅಳವಡಿಸಲಾಗಿದೆ. ಸಿ.ಸಿ ಕ್ಯಮೆರಾ ಅಳವಡಿಸಲಾಗಿದೆ ಎಂದರು.
ಬಂದೋಬಸ್ತ್‌ಗಾಗಿ ವಿವಿಧೆಡೆಗಳಿಂದ ಆಗಮಿಸಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಭಾನುವಾರವೇ ಕಾರ್ಯಕ್ರಮದ ಸ್ಥಳದಲ್ಲಿ ಜಮಾವಣೆಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.