
ಪ್ರಜಾವಾಣಿ ವಾರ್ತೆ
ಚಿಕ್ಕಬಳ್ಳಾಪುರ: ಲೂಟಿ ಎನ್ನುವ ಪದ ಮತ್ತು ಆ ಸಂಸ್ಕೃತಿಗೆ ಅಧ್ಯಕ್ಷರಾಗುವ ಅರ್ಹತೆ ಇರುವುದು ಎಚ್.ಡಿ.ಕುಮಾರಸ್ವಾಮಿ ಅವರೊಬ್ಬರಿಗೆ ಮಾತ್ರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಟೀಕಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಯಾವ ಸಂದರ್ಭದಲ್ಲಿ ಯಾರನ್ನು ಹೊಗಳುತ್ತಾರೆ, ಯಾರನ್ನು ತೆಗಳುತ್ತಾರೆ ಎನ್ನುವುದು ಅವರಿಗೇ ಗೊತ್ತಿಲ್ಲ ಎಂದರು.
ಕುಮಾರಸ್ವಾಮಿ ಅವರ ಮಾತುಗಳನ್ನು ಜನರು ಸಹ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ಯಾರೂ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.