ಗೌರಿಬಿದನೂರು: ಪಿಎಂ ಧನಧಾನ್ಯ ಕೃಷಿ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಕೃಷಿ ಸಹಾಯಕ ನಿರ್ದೇಶಕಿ ಡಿ.ರಾಜೇಶ್ವರಿ ಹೇಳಿದರು.
ನಗರದ ಪಂಚಾಯಿತಿಯಲ್ಲಿ ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡಿ, ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆ ಕೇಂದ್ರ ಸರ್ಕಾರವು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಕ್ಷೇತ್ರವನ್ನು ಸುಧಾರಿಸಲು ಮತ್ತು ರೈತರ ಆದಾಯ ಹೆಚ್ಚಿಸಲು ಪ್ರಾರಂಭಿಸಲಾಗಿದೆ. ಯೋಜನೆ ಆರು ವರ್ಷಗಳ ಅವಧಿಗೆ, ಕಡಿಮೆ ಉತ್ಪಾದಕತೆ, ಕಡಿಮೆ ಬೆಳೆ ತೀವ್ರತೆ ಮತ್ತು ಕಡಿಮೆ ಸಾಲ ವಿತರಣೆ ಹೊಂದಿರುವ ಜಿಲ್ಲೆಗಳಲ್ಲಿ ಜಾರಿಗೆ ಬಂದಿದೆ. ಜಿಲ್ಲೆಯು ಸಹ ಈ ಯೋಜನೆಯಲ್ಲಿ ಸೇರಿದೆ ಎಂದರು.
ರೈತರಿಗೆ ಉತ್ತಮ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಪೂರೈಕೆ, ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಲು ಪ್ರೋತ್ಸಾಹ, ನೀರಿನ ಸಮರ್ಪಕ ಬಳಕೆಯ ಜಾಗೃತಿ, ಕೃಷಿ ತರಬೇತಿ ಮತ್ತು ಮಾರ್ಗದರ್ಶನ ಸೇರಿದಂತೆ ಹಲವು ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
ಕೃಷಿಕ ಸಮಾಜದ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ಕೃಷಿ ಅಧಿಕಾರಿಗಳು ಹಾಗೂ ರೈತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.