ADVERTISEMENT

ಪ್ರಜ್ವಲ್ ಪ್ರಕರಣ: ಚಿಕ್ಕಬಳ್ಳಾಪುರದಲ್ಲಿ ಸಿಎಂ, ಡಿಸಿಎಂ ವಿರುದ್ಧ JDS ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಮೇ 2024, 7:16 IST
Last Updated 7 ಮೇ 2024, 7:16 IST
   

ಚಿಕ್ಕಬಳ್ಳಾಪುರ: ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಬೇಡ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಶಿಡ್ಲಘಟ್ಟ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಮಾನವ ಸರಪಳಿ ರಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಟಿ ಎಂದರೆ ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಡಿಕೆಶಿ ವಿರುದ್ಧ ಘೋಷಣೆ ಕೂಗಿದರು. ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.