ಶಿಡ್ಲಘಟ್ಟ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗ ಸಂಸ್ಥೆ ತಲಕಾಯಲಬೆಟ್ಟ ಬ್ರಾಹ್ಮಣ ಸಂಘಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸೆ.14 ಭಾನುವಾರ ಬೆಳಗ್ಗೆ 9 ಗಂಟೆಗೆ ತಲಕಾಯಲಬೆಟ್ಟದಲ್ಲಿ ಸುವರ್ಣ ಸಂಭ್ರಮ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಲಕಾಯಲಬೆಟ್ಟ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಆರ್.ಶಂಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್.ರಘುನಾಥ್ ಸಮ್ಮಿಲನವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಬಿ.ಎನ್.ರವಿಕುಮಾರ್, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಲಕಾಯಲಬೆಟ್ಟ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಆರ್.ಶಂಕರ್ ವಹಿಸಿಕೊಳ್ಳಲಿದ್ದಾರೆ. ವೈ.ವಿ.ಗುಂಡೂರಾವ್, ವಂದೇ ಮಾತರಂ ಪಾಠಶಾಲೆಯ ಸಂಸ್ಥಾಪಕ ಅಧ್ಯಕ್ಷ ಡಾ.ಜಿ.ಬಿ.ಹರೀಶ್ ಪ್ರೇರಣಾ ಭಾಷಣ ಮಾಡಲಿದ್ದಾರೆ. ಕುಮಾರಿ ನಿಹಾರಿಕಾ ಅವರಿಂದ ಭರತನಾಟ್ಯ ನಡೆಯಲಿದೆ. 101 ಹಿರಿಯ ದಂಪತಿಗೆ, ಮಹಿಳಾ ಸಂಘದಿಂದ ನಡೆದ ಕ್ರೀಡಾ ಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದರು.
ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ ಪಲಿಚೇರ್ಲು ಪಿ.ಆರ್.ಪ್ರಕಾಶ್, ದಿಬ್ಬೂರಹಳ್ಳಿ ಶಂಕರ ಸೇವಾ ಸಮಿತಿ ಅಧ್ಯಕ್ಷ ಮೋಕ್ಷಚಗುಂಡಂ ವಿ.ಸೂರ್ಯಕುಮಾರ್, ಗಾಯಿತ್ರಿ ಮಹಿಳಾ ಮಂಡಳಿ ಅಧ್ಯಕ್ಷೆ ಎಸ್.ವಿ.ವಿಜಯಲಕ್ಷ್ಮಿಸೂರ್ಯಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.