ADVERTISEMENT

ಶಿಡ್ಲಘಟ್ಟ: ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 4:22 IST
Last Updated 22 ಅಕ್ಟೋಬರ್ 2021, 4:22 IST
ಶಿಡ್ಲಘಟ್ಟ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ ಮೂಲಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು
ಶಿಡ್ಲಘಟ್ಟ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ ಮೂಲಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು   

ಶಿಡ್ಲಘಟ್ಟ: ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಮೂಲಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.

ಸಂಘದ ಅಧ್ಯಕ್ಷ ಸಿ.ಎಂ. ಮುನಿರಾಜು ಮಾತನಾಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯಶಿಕ್ಷಕರಿಗೆ 15, 20, 25 ವರ್ಷಗಳ ವೇತನ ಬಡ್ತಿ ಸೇರಿದಂತೆ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಬೇಕು ಎಂದು ರಾಜ್ಯ ಸಂಘದ ನೇತೃತ್ವದಲ್ಲಿ ಹೋರಾಟ ನಡೆಸುತ್ತಾ ಬಂದಿದ್ದರೂ ಸರ್ಕಾರ ಹಾಗೂ ಇಲಾಖೆಯಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ಸೂಚನೆ ಮೇರೆಗೆ ಇಂದಿನಿಂದ ಅ. 29ರವರೆಗೂ ಕಪ್ಪುಪಟ್ಟಿ ಧರಿಸುವ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆ ನಿರ್ವಹಿಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಯೋಜನೆ ರೂಪಿಸಲಾಗಿದೆ ಎಂದರು.

ADVERTISEMENT

ಇಷ್ಟಾದರೂ ಸರ್ಕಾರ ಹಾಗೂ ಇಲಾಖೆ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗದೇ ಇದ್ದರೆ ಅ. 30ರಿಂದ ನ. 10ರವರೆಗೂ ಬಿಸಿಯೂಟದ ಮಾಹಿತಿಯನ್ನು ಅಪ್‌ಡೇಟ್ ಮಾಡದೇ ಅಸಹಕಾರ ವ್ಯಕ್ತಪಡಿಸಲಾಗುವುದು.ನ. 11ರಿಂದ 18ರವರೆಗೂ ಸ್ಯಾಟ್ಸ್ ಮಾಹಿತಿ ಅಪ್‌ಲೋಡ್ ಮಾಡದೇ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಹಂತ ಹಂತವಾದ ಹೋರಾಟ ಹಮ್ಮಿಕೊಳ್ಳಲಾಗುವುದು.ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಶಾಲಾ ಬಹಿಷ್ಕಾರ ನಡೆಸಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸುಂದರಾಚಾರಿ, ಪಿಳ್ಳಣ್ಣ, ಸುದರ್ಶನ್‌ ಪಿ., ಸಾದಿಕ್ ಪಾಷ, ಮಂಜುನಾಥ ಬಿ.ವಿ. ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.