ADVERTISEMENT

ಮಿಶ್ರ ಬೇಸಾಯದಿಂದ ಲಾಭ: ಸಿಂಧು

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 3:23 IST
Last Updated 24 ಡಿಸೆಂಬರ್ 2020, 3:23 IST
ಶಿಡ್ಲಘಟ್ಟದ ಸ್ತ್ರೀಶಕ್ತಿ ಭವನದಲ್ಲಿ ನಡೆದ ರೈತ ದಿನಾಚರಣೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಸಿಂಧು ಮಾತನಾಡಿದರು
ಶಿಡ್ಲಘಟ್ಟದ ಸ್ತ್ರೀಶಕ್ತಿ ಭವನದಲ್ಲಿ ನಡೆದ ರೈತ ದಿನಾಚರಣೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಸಿಂಧು ಮಾತನಾಡಿದರು   

ಶಿಡ್ಲಘಟ್ಟ: ಸಾವಯವ ಕೃಷಿ ಪದ್ಧತಿ ಮತ್ತು ಮಿಶ್ರ ಬೆಳೆ ಬೇಸಾಯ ಕ್ರಮದಿಂದ ರೈತರ ಬದುಕು ಹಸನವಾಗಲು ಸಾಧ್ಯವಾಗುತ್ತದೆ ಎಂದು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಸಿಂಧು ತಿಳಿಸಿದರು.

ಸ್ತ್ರೀಶಕ್ತಿ ಭವನದಲ್ಲಿ ಬುಧವಾರ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಆತ್ಮ), ಕೃಷಿ ಇಲಾಖೆ ಮತ್ತು ತಾಲ್ಲೂಕು ಕೃಷಿಕ ಸಮಾಜದ ಸಹಯೋಗದಲ್ಲಿ ನಡೆದ ರೈತ ದಿನಾಚರಣೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರು ಬದಲಾಗಬೇಕು. ಕೃಷಿಯಲ್ಲಿ ಯಂತ್ರೋಪಕರಣ ಬಳಕೆ, ಸಾವಯವ ಕೃಷಿ ಪದ್ಧತಿ, ಒಂದೇ ಬೆಳೆಯನ್ನು ಅವಲಂಬಿಸದೆ ಮಿಶ್ರ ಬೆಳೆ ಕ್ರಮವನ್ನು ಅನುಸರಿಸಿದರೆ ಲಾಭವಾಗುತ್ತದೆ. ಏಕ ಬೆಳೆ ಪದ್ಧತಿಯ ಬೇಸಾಯ ಕೃಷಿಕರ ಪಾಲಿಗೆ ಮಾರಕ. ಮಿಶ್ರ ಬೆಳೆ ಪದ್ಧತಿ ರೈತರ ರಕ್ಷಕನಿದ್ದಂತೆ. ರಾಸಾಯನಿಕ ಮುಕ್ತ ಕೃಷಿ ಅಳವಡಿಸಿಕೊಂಡರೆ ಎಂದೂ ನಷ್ಟ ಎಂಬ ಮಾತೇ ಬೆಳೆಗಾರರ ಬಾಯಿಂದ ಹೊರ ಬರುವುದಿಲ್ಲ ಎಂದರು.

ADVERTISEMENT

ಆತ್ಮ ಯೋಜನಾ ನಿರ್ದೇಶಕ ಸತೀಶ್ ಕುಮಾರ್ ಮಾತನಾಡಿ, ‘ಆತ್ಮ’ (ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ)ಯ ಕೃಷಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಅಡಿಯಲ್ಲಿ ಕೃಷಿಯನ್ನು ಆಧುನೀಕರಿಸಲು ರೈತರಿಗೆ ತರಬೇತಿ ನೀಡುತ್ತಿದೆ. ಇದರ ಅಡಿಯಲ್ಲಿ ರೈತರಿಗೆ ತರಬೇತಿ, ಪ್ರದರ್ಶನ, ಅಧ್ಯಯನ, ಭೇಟಿ, ಕೃಷಿ ಮೇಳಗಳು, ರೈತರ ಗುಂಪುಗಳನ್ನು ಆಯೋಜಿಸುವುದು ಮತ್ತು ಕೃಷಿ ಶಾಲೆಗಳನ್ನು ನಡೆಸಲಾಗುವುದು. ಕೃಷಿ ವಿಜ್ಞಾನಿಗಳು ಮತ್ತು ರೈತರ ನಡುವೆ ಉತ್ತಮ ಸಮನ್ವಯತೆ ಸ್ಥಾಪಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.

ಸಹಾಯಕ ಕೃಷಿ ನಿರ್ದೇಶಕ ಎಸ್.ವಿ.ಮಂಜುನಾಥ್, ಕೃಷಿ ಅಧಿಕಾರಿಗಳಾದ ಶ್ರೀನಿವಾಸ್, ಮೋಹನ್ ಕುಮಾರ್, ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕ ಎನ್.ಅಶ್ವತ್ಥನಾರಾಯಣ್, ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಸುಸ್ಮಿತಾ, ಆಶಾರಾಣಿ, ಪ್ರಗತಿಪರ ರೈತ
ರಾದ ಎಚ್.ಜಿ.ಗೋಪಾಲಗೌಡ, ಬೋದಗೂರು ವೆಂಕಟಸ್ವಾಮಿರೆಡ್ಡಿ, ಮುತ್ತೂರು ಕೆಂಪೇಗೌಡ, ಜೆ.ಎಸ್.ವೆಂಕಟಸ್ವಾಮಿ, ತಾದೂರು ಮಂಜುನಾಥ್, ಮುನಿಕೆಂಪಣ್ಣ, ರವಿಪ್ರಕಾಶ್, ಬೆಳ್ಳೂಟಿ ನಾಗಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.