ADVERTISEMENT

ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಿ: ಎಸ್.ಎನ್.ಸುಬ್ಬಾರೆಡ್ಡಿ

ಆಶ್ರಯ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 1:58 IST
Last Updated 19 ಸೆಪ್ಟೆಂಬರ್ 2020, 1:58 IST
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ಆಶ್ರಯ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ಆಶ್ರಯ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು   

ಬಾಗೇಪಲ್ಲಿ: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬಡವರಿಗೆ ಆಶ್ರಯ ಯೋಜನೆಯಡಿಯಲ್ಲಿ ಉಚಿತ ನಿವೇಶನಗಳನ್ನು ವಿತರಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆಶ್ರಯ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲ್ಲೂಕು ಡಿ.ಎಂ.ನಂಜುಂಡಪ್ಪ ವರದಿ ಪ್ರಕಾರ ಅತಿ ಹಿಂದುಳಿದ ತಾಲ್ಲೂಕು ಆಗಿದೆ. ಬಡ ಅರ್ಹ ಫಲಾನುಭವಿಗಳಿಗೆ ನಿವೇಶನ, ಮನೆ ಹಂಚಿಕೆ ಮಾಡುವುದರಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಕೂಡಲೇ 25 ಗ್ರಾಮ ಪಂಚಾಯಿತಿ ಪಿಡಿಒಗಳು ಸರ್ಕಾರಿ ಭೂಮಿ, ಗೋಮಾಳವನ್ನು ಗುರುತಿಸಿ, ಬಡವರಿಗೆ ನಿವೇಶನ ವಿತರಿಸಲು ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ADVERTISEMENT

14 ಗ್ರಾಮಗಳಲ್ಲಿ ಆಶ್ರಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 721 ನಿವೇಶನ ವಿತರಿಸಲು ನಕ್ಷೆ ಸಿದ್ಧಪಡಿಸಲಾಗಿದೆ. 18.22 ಎಕರೆ ಜಮೀನನ್ನು ಸ್ಥಳ ಪರಿಶೀಲಿಸಿ ಅಳತೆ ಮಾಡಲಾಗಿದೆ ಎಂದರು.

ತಾಲ್ಲೂಕಿನಲ್ಲಿ ಸಮರ್ಪಕವಾಗಿ ನರೇಗಾ ಕೆಲಸ, ಕೂಲಿ ಹಣ ವಿತರಿಸಬೇಕು. ಇತರೆ ತಾಲ್ಲೂಕುಗಳಿಗಿಂತ ನಮ್ಮ ತಾಲ್ಲೂಕಿನಲ್ಲಿ ನರೇಗಾ ಪ್ರಗತಿ ಕಾಮಗಾರಿ ಕಡಿಮೆ ಇದೆ. ಪಂಚಾಯಿತಿ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಆರ್.ನೋಮೇಶ್ ಕುಮಾರ್, ಸದಸ್ಯ ಲಕ್ಷ್ಮಿನರಸಿಂಹಪ್ಪ, ತಹಶೀಲ್ದಾರ್ ಎಂ.ನಾಗರಾಜು, ಇಒ ಎಚ್.ಎನ್. ಮಂಜುನಾಥಸ್ವಾಮಿ, ಕೆ.ಆರ್.ನರೇಂದ್ರಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.