ಚಿಂತಾಮಣಿ: ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುವ ಮಾಹಿತಿ ಹಿನ್ನೆಲೆಯಲ್ಲಿ ಮೇ 20ರ ರಾತ್ರಿ 10 ಗಂಟೆಯಿಂದ 23ರ ಬೆಳಗ್ಗೆ 6 ಗಂಟೆವರೆಗೆ ವಿಧಿಸಿದ್ದ ನಿಷೇಧಾಜ್ಞೆಯನ್ನು ಮೇ 26ರ ಬೆಳಗ್ಗೆ 6 ಗಂಟೆವರೆಗೆ ವಿಸ್ತರಿಸಲಾಗಿದೆ.
ನಗರದ ಅಂಜನಿ ಬಡಾವಣೆ, ಎನ್.ಆರ್.ಬಡಾವಣೆ, ವಿನೋಭಾ ಕಾಲೋನಿ, ಕೆ.ಆರ್.ಬಡಾವಣೆ, ಗಜಾನನ ವೃತ್ತ, ಅಜಾದ್‌ಚೌಕ, ಬೆಂಗಳೂರು ವೃತ್ತ, ತಪಥೇಶ್ವರ ಕಾಲೋನಿ ಮತ್ತು ಸರ್ಕಾರಿ ಕಚೇರಿಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದೆ.
ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.