ಗೌರಿಬಿದನೂರು: ವಾಹನಗಳ ಚಾಲಕರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಕಾಯ್ದೆಯನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ನಗರದಲ್ಲಿ ಲಾರಿ ಮತ್ತು ವಾಹನ ಚಾಲಕರ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿದರು. ಪ್ರತಿಭಟನೆಗೂ ಮುನ್ನ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು.
ಚಾಲಕರ ಜೀವನಕ್ಕೆ ಭದ್ರತೆ ಇಲ್ಲ. ಹಗಲು ರಾತ್ರಿ ವಾಹನಗಳನ್ನು ಚಲಾಯಿಸುವರು. ಆದರೆ ಸರ್ಕಾರಗಳು ಚಾಲಕರ ಬೆಂಬಲಕ್ಕೆ ನಿಲ್ಲುತ್ತಿಲ್ಲ. ಕೇಂದ್ರ ಸರ್ಕಾರದ ಕಾನೂನಿನ ಪ್ರಕಾರ ಹೆದ್ದಾರಿಗಳಲ್ಲಿ ಅಪಘಾತಗಳು ನಡೆದರೆ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ ಮತ್ತು ₹ 7 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ. ಇದರು ಚಾಲಕರ ಬದುಕಿನ ಮೇಲೆ ಪ್ರಹಾರ ನಡೆಸಿದಂತೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಕಾಯ್ದೆಯು ವಾಹನಗಳ ಚಾಲಕರಿಗೆ ಮರಣ ಶಾಸನವಾಗಿದೆ. ತಕ್ಷಣವೇ ಈ ಕಾಯ್ದೆಯನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಸಂಘದ ಪದಾಧಿಕಾರಿಗಳಾದ ಸುಬ್ರಮಣಿ, ಇನಾಯತುಲ್ಲಾ, ಕೃಷ್ಣಮೂರ್ತಿ, ಗಿರೀಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.