ADVERTISEMENT

ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಅಕಾಲಿಕ ಮಳೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 5:33 IST
Last Updated 20 ಫೆಬ್ರುವರಿ 2021, 5:33 IST
ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸುರಿದ ಮಳೆ
ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸುರಿದ ಮಳೆ   

ಚಿಕ್ಕಬಳ್ಳಾಪುರ: ಜಿಲ್ಲೆಯ ಹಲವು ತಾಲೂಕುಗಳಲ್ಲಿ ಶುಕ್ರವಾರ ಸಂಜೆ ಅಕಾಲಿಕ ಮಳೆಯಾಗಿದೆ.

ಹೊತ್ತಲ್ಲದ ಹೊತ್ತಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ರಾಗಿ ಒಕ್ಕಣೆ ಮಾಡಿದ್ದ ರೈತರಿಗೆ
ಸಂಕಷ್ಟಕ್ಕೆ ಸಿಲುಕುವಂತೆ ಮಾಡಿತು. ದ್ವಿಚಕ್ರ ವಾಹನ ಸವಾರರು ಸಂಚಾರದ ವೇಳೆ ತೊಂದರೆ ಅನುಭವಿಸಿದರು.

ಜಿಲ್ಲೆಯಾದ್ಯಂತ ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಕವಿದು, ತಂಗಾಳಿ ಬೀಸುತ್ತಿತ್ತು. ಸಂಜೆ ಸುರಿದ ಮಳೆಯಿಂದಾಗಿ ವಾತಾವರಣ ಸಂಪೂರ್ಣ ತಂಪಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.