ADVERTISEMENT

ಶಿಡ್ಲಘಟ್ಟ: ಮಳೆ ನೀರು ಸಂಗ್ರಹ ಪ್ರಾತ್ಯಕ್ಷಿಕೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 6:46 IST
Last Updated 8 ಅಕ್ಟೋಬರ್ 2021, 6:46 IST
ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೆಗೌಡನಹಳ್ಳಿಯಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ವಿದ್ಯಾರ್ಥಿಗಳು ಗ್ರಾಮಸ್ಥರಿಗೆ ಮಳೆ ನೀರು ಸಂಗ್ರಹ ಹಾಗೂ ಅಣಬೆ ಬೇಸಾಯ ಕುರಿತು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಟ್ಟರು
ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೆಗೌಡನಹಳ್ಳಿಯಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ವಿದ್ಯಾರ್ಥಿಗಳು ಗ್ರಾಮಸ್ಥರಿಗೆ ಮಳೆ ನೀರು ಸಂಗ್ರಹ ಹಾಗೂ ಅಣಬೆ ಬೇಸಾಯ ಕುರಿತು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಟ್ಟರು   

ಶಿಡ್ಲಘಟ್ಟ: ‘ಪ್ರತಿಯೊಬ್ಬರೂ ಜಮೀನು ಮತ್ತು ಮನೆಗಳ ಮೇಲೆ ಬೀಳುವ ಮಳೆ ನೀರನ್ನು ಸಂಗ್ರಹಿಸಬೇಕು. ಅಂತರ್ಜಲಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ಕೊಳವೆಬಾವಿಗಳನ್ನು ನೆಚ್ಚಿಕೊಂಡಿರಬಾರದು. ಅಂತರ್ಜಲ ಹೆಚ್ಚಿಸಲು ಮಳೆ ನೀರು ಸಂಗ್ರಹ ಮತ್ತು ಕೃಷಿ ಹೊಂಡ ನಿರ್ಮಿಸಲು ಪಂಚಾಯಿತಿಯಿಂದ ಅನುಮೋದನೆ ಪಡೆದು ಮನೆ ಮತ್ತು ಹೊಲಗಳಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ವಿದ್ಯಾರ್ಥಿನಿಯರಾದ ಹಂಸಶ್ರೀ ಮತ್ತು ಚೈತ್ರಾ ಸಲಹೆ ನೀಡಿದರು.

ತಾಲ್ಲೂಕಿನ ಅಪ್ಪೆಗೌಡನಹಳ್ಳಿಯಲ್ಲಿ ಗ್ರಾಮೀಣ ಕೃಷಿ ಕಾರ್ಯನುಭವ ಚಟುವಟಿಕೆ ಅಡಿಯಲ್ಲಿ ಗ್ರಾಮ ವಾಸ್ತವ್ಯ ಹೂಡಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ವಿದ್ಯಾರ್ಥಿಗಳಿಂದ ಗ್ರಾಮಸ್ಥರೊಂದಿಗೆ ನಡೆದ ಮಳೆ ನೀರು ಸಂಗ್ರಹ ಕುರಿತ ಗುಂಪು ಚರ್ಚಾ ಸಭೆಯಲ್ಲಿ ಅವರುಮಾತನಾಡಿದರು.

ವಿದ್ಯಾರ್ಥಿಗಳಾದ ಆದರ್ಶ ಹಾಗೂ ಆರವ್ ಮಾತನಾಡಿ, ಕೊಳವೆ ಬಾವಿ ಮರುಪೂರಣ ಮತ್ತು ಕೊಳವೆ ಬಾವಿ ಬಳಿ ಇಂಗು ಗುಂಡಿ ಮಾಡಿ ಕೊಳವೆ ಬಾವಿಗಳಲ್ಲಿ ನೀರನ್ನು ಹೆಚ್ಚಿಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ADVERTISEMENT

ವಿದ್ಯಾರ್ಥಿನಿಯರಾದ ಅರ್ಪಿತಾ, ಅಂಕಿತಾ ಮತ್ತು ಬಿಂದು ಅಣಬೆಯನ್ನು ಮನೆಯಲ್ಲಿ ಉತ್ಪಾದಿಸುವ ಬಗ್ಗೆ ಮಾಹಿತಿ ನೀಡಿದರು.

ಗ್ರಾಮಸ್ಥರು ಹಾಗೂ ಕೃಷಿ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.