ಕೆ.ಎನ್. ರಾಜಣ್ಣ
ಗೌರಿಬಿದನೂರು: ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದನ್ನು ಖಂಡಿಸಿ ತಾಲ್ಲೂಕಿನ ವಿವಿಧ ಸಂಘಟನೆಗಳು ಮತ್ತು ಕೆ.ಎನ್. ರಾಜಣ್ಣ ಅಭಿಮಾನಿಗಳ ನೇತೃತ್ವದಲ್ಲಿ ಇದೇ 30ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಾಲ್ಮೀಕಿ ಸಂಘದ ಮುಖಂಡ ಆರ್. ಅಶೋಕಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಕೆ.ಎನ್. ರಾಜಣ್ಣ ಅವರು ದಲಿತ, ಹಿಂದುಳಿದ, ಬಡವರು ಮತ್ತು ರೈತ ವರ್ಗಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಂಥ ನಾಯಕನನ್ನು ಸಚಿವ ಸ್ಥಾನದಿಂದ ವಜಾ ಮಾಡಿರುವುದು ವಾಲ್ಮೀಕಿ, ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಮಾಡಿದ ಅನ್ಯಾಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನಡೆಯುವ ದಿನ ಕೆ.ಎನ್. ರಾಜಣ್ಣ ಅವರ ಭಾವಚಿತ್ರ ಮತ್ತು ಸಂಘಟನೆಗಳ ಬಾವುಟ ಹಿಡಿದು, ಅಂಬೇಡ್ಕರ್ ವೃತ್ತದಿಂದ ತಾಲ್ಲೂಕಿನ ಪ್ರಜಾಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಎಲ್ಲ ದಲಿತಪರ ಸಂಘಟನೆಗಳು ಮತ್ತು ಕೆ.ಎನ್. ರಾಜಣ್ಣ ಅವರ ಅಭಿಮಾನಿಗಳು ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.