
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದಿಂದ ಗೋವಾಕ್ಕೆ ತೆರಳುವಾಗ ಚಿಕ್ಕಬಳ್ಳಾಪುರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
‘ಬಂಧನ ಖಚಿತ. ಆದರೆ ಸದ್ಯ ಯಾವುದೇ ಮಾಹಿತಿ ನೀಡುವುದಿಲ್ಲ. ನಾಳೆ ಸಮಗ್ರವಾಗಿ ವಿವರ ನೀಡಲಾಗುವುದು’ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ‘ಪ್ರಜಾವಾಣಿ’ಗೆ ತಿಳಿಸಿದರು.
ಜ.22ರಂದು ರಾಜೀವ್ ಗೌಡ ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಕಾರನ್ನು ನಿಲ್ಲಿಸಿ ಕೇರಳಕ್ಕೆ ತೆರಳಿದ್ದರು. ಗೋವಾಕ್ಕೆ ಪ್ರಯಾಣಿಸುವ ವೇಳೆ ಕೇರಳದಲ್ಲಿ ಬಂಧಿಸಲಾಗಿದೆ. ಅವರನ್ನು ಚಿಕ್ಕಬಳ್ಳಾಪುರಕ್ಕೆ ಕರೆ ತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜೀವ್ ಗೌಡ ಬಂಧನಕ್ಕೆ ಚಿಕ್ಕಬಳ್ಳಾಪುರ ಸಿಇಎನ್ ಠಾಣೆ ಇನ್‌ಸ್ಪೆಕ್ಟರ್ ಸೂರ್ಯಪ್ರಕಾಶ್ ಮತ್ತು ಶಿಡ್ಲಘಟ್ಟ ವೃತ್ತ ಇನ್‌ಸ್ಪೆಕ್ಟರ್ ಆನಂದ್ ಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಈ ತಂಡವೇ ರಾಜೀವ್ ಗೌಡ ಅವರನ್ನು ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.