
ಶಿಡ್ಲಘಟ್ಟ: ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ನಲ್ಲರಾಳ್ಳಹಳ್ಳಿ ಬಳಿಯಿರುವ ರಾಮಲಿಂಗೇಶ್ವರ ಬೆಟ್ಟದ ರಾಮಲಿಂಗೇಶ್ವರ ರಥೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲಿನ ಗ್ರಾಮಗಳೂ ಸೇರಿದಂತೆ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾದರು.
ರಥೋತ್ಸವ ಅಂಗವಾಗಿ ಸ್ವಾಮಿಗೆ ಹೂವಿನ ಅಲಂಕಾರ ಮಾಡಿ ಮಂಗಳಾರತಿ ಮಾಡಿ ತೀರ್ಥಪ್ರಸಾದ ವಿನಿಯೋಗಿಸಲಾಯಿತು. ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
ಅಲಂಕೃತ ಉತ್ಸವ ಮೂರ್ತಿಗಳನ್ನು ತೇರಿಯಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ತಹಶೀಲ್ದಾರ್ ಎನ್.ಗಗನ ಸಿಂಧು, ಶಾಸಕ ಬಿ.ಎನ್.ರವಿಕುಮಾರ್ ತೇರಿನ ಹಗ್ಗ ಹಿಡಿದೆಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
ಶಾಸಕ ಬಿ.ಎನ್.ರವಿಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಸುನಿತಾ ಶ್ರೀನಿವಾಸರೆಡ್ಡಿ, ಅಮ್ಮಗಾರಹಳ್ಳಿ ಬೈರಾರೆಡ್ಡಿ, ರಾಜೀವ್ ಗೌಡ, ಸೀಕಲ್ ರಾಮಚಂದ್ರಗೌಡ, ಪುಟ್ಟು ಆಂಜಿನಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.