ADVERTISEMENT

ಎಸ್ಸೆಸ್ಸೆಲ್ಸಿ: ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 3:44 IST
Last Updated 13 ಆಗಸ್ಟ್ 2021, 3:44 IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳು
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳು   

ಚಿಕ್ಕಬಳ್ಳಾಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ಜಿಲ್ಲೆಯ 30 ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದಿಂದ ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತವಾಯಿತು.

ಜಿಲ್ಲಾಧಿಕಾರಿ ಆರ್. ಲತಾ, ಕಳೆದ ಎರಡು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ ಫಲಿತಾಂಶ ಪಡೆಯುತ್ತಿದೆ. ಇದು ಸಂತಸದ ವಿಷಯ ಎಂದು ಹೇಳಿದರು.

ಈ 30 ವಿದ್ಯಾರ್ಥಿಗಳಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣ ಭಾಗದವರಾಗಿದ್ದಾರೆ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿ ಮತ್ತು ಪ್ರೇರಣೆ ಆಗಿದೆ. ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಕಾಲಕಾಲಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಸೂಚನೆಗಳನ್ನು ನೀಡಿತ್ತು. ಜಿಲ್ಲೆಯ ಎಲ್ಲ ಶಿಕ್ಷಕರಿಗೂ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತುಎಂದಿದ್ದಾರೆ.

ADVERTISEMENT

ಪರೀಕ್ಷೆ ಬರೆದ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಶೇ 30.30 ರಷ್ಟು ವಿದ್ಯಾರ್ಥಿಗಳು ‘ಎ+’, ಶೇ 40.57ರಷ್ಟು ವಿದ್ಯಾರ್ಥಿಗಳು ‘ಎ’ ಮತ್ತು ಶೇ 27.39 ರಷ್ಟು ವಿದ್ಯಾರ್ಥಿಗಳು ‘ಬಿ’ ಹಾಗೂ ಶೇ 1.74 ರಷ್ಟು ವಿದ್ಯಾರ್ಥಿಗಳು ‘ಸಿ’ ಗ್ರೇಡ್ ಪಡೆದಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.