ADVERTISEMENT

37 ಹೊಸ ಪ್ರಕರಣ, 60 ಮಂದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 3:39 IST
Last Updated 8 ನವೆಂಬರ್ 2020, 3:39 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 37 ಕೋವಿಡ್‌ ಪ್ರಕರಣಗಳು ವರದಿಯಾದರೆ, 60 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,75,026 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,63,345 ಜನರ ವರದಿಗಳು ನೆಗೆಟಿವ್ ಬಂದಿವೆ. ಈವರೆಗೆ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 11,681ಕ್ಕೆ ಏರಿಕೆಯಾಗಿದ್ದು, 112 ಮಂದಿ ಮೃತಪಟ್ಟರೆ, 11,464 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 105 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT