ADVERTISEMENT

ಶಿಡ್ಲಘಟ್ಟ: ಜೆ.ಎಂ.ಎಫ್‌.ಸಿ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 27 ಜನವರಿ 2025, 14:13 IST
Last Updated 27 ಜನವರಿ 2025, 14:13 IST
ಶಿಡ್ಲಘಟ್ಟದ ಜೆ.ಎಂ.ಎಫ್‌.ಸಿ ನ್ಯಾಯಾಲಯದಲ್ಲಿ 76ನೇ ಗಣ ರಾಜ್ಯೋತ್ಸವ ಆಚರಿಸಲಾಯಿತು
ಶಿಡ್ಲಘಟ್ಟದ ಜೆ.ಎಂ.ಎಫ್‌.ಸಿ ನ್ಯಾಯಾಲಯದಲ್ಲಿ 76ನೇ ಗಣ ರಾಜ್ಯೋತ್ಸವ ಆಚರಿಸಲಾಯಿತು   

ಶಿಡ್ಲಘಟ್ಟ: ಗಣರಾಜ್ಯೋತ್ಸವ ಎಲ್ಲ ಕಕ್ಷಿದಾರರಿಗೂ ಸಕಾಲಕ್ಕೆ ನ್ಯಾಯ ಸಿಗುವಂತಾಗಲು ಪೂರಕವಾಗಲಿ ಎಂದು ಇಲ್ಲಿನ ಜೆ.ಎಂ.ಎಫ್‌.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು.

ನಗರದ ದಿಬ್ಬೂರಹಳ್ಳಿ ಮಾರ್ಗದಲ್ಲಿ ಜೆ.ಎಂ.ಎಫ್‌.ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘ ಹಾಗೂ ನ್ಯಾಯಾಲಯದ ಸಿಬ್ಬಂದಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದಲ್ಲಿ ಮಾತನಾಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜೆ.ಪೂಜಾ, ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಎಲ್ಲ ವಕೀಲರು, ನ್ಯಾಯಾಲಯದ ಸಿಬ್ಬಂದಿ, ಕಕ್ಷಿದಾರರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.