ADVERTISEMENT

ಶಿಡ್ಲಘಟ್ಟ: ಡಿಸಿಸಿ ಬ್ಯಾಂಕ್‌ನಲ್ಲಿ ಠೇವಣಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮನವಿ

ರೈತರು, ಹಾಲು ಉತ್ಪಾದಕರ ಧೋರಣೆಗೆ ಅಧ್ಯಕ್ಷ ಗೋವಿಂದಗೌಡ ಬೇಸರ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 2:14 IST
Last Updated 29 ನವೆಂಬರ್ 2020, 2:14 IST
ಶಿಡ್ಲಘಟ್ಟ ತಾಲ್ಲೂಕಿನ ನಾಗಮಂಗಲ ಗ್ರಾಮದಲ್ಲಿ ಮಳಮಾಚನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿದರು
ಶಿಡ್ಲಘಟ್ಟ ತಾಲ್ಲೂಕಿನ ನಾಗಮಂಗಲ ಗ್ರಾಮದಲ್ಲಿ ಮಳಮಾಚನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿದರು   

ಶಿಡ್ಲಘಟ್ಟ: ‘ಸಾಲಕ್ಕೆ ಡಿಸಿಸಿ ಬ್ಯಾಂಕ್ ಬೇಕು. ಠೇವಣಿ ಇಡಲು ಮಾತ್ರ ರಾಷ್ಟ್ರೀಕೃತ ಬ್ಯಾಂಕ್‌ಗಳು ಬೇಕು ಎನ್ನುವ ಧೋರಣೆಯನ್ನು ರೈತರು ಸೇರಿದಂತೆ ಹಾಲು ಉತ್ಪಾದಕರು ಬಿಡಬೇಕು’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.

ತಾಲ್ಲೂಕಿನ ನಾಗಮಂಗಲ ಗ್ರಾಮದಲ್ಲಿ ಶುಕ್ರವಾರ ಮಳಮಾಚನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, 2019-20ನೇ ಸಾಲಿನ ವಾರ್ಷಿಕ ಮಹಾಸಭೆಯಯಲ್ಲಿ ಮಾತನಾಡಿದರು.

‘ರೈತರ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಬೇಡಿಕೆಗೆ ಅನುಸಾರವಾಗಿ ಸಾಲ ನೀಡಬೇಕಾದರೆ ಪ್ರತಿಯೊಬ್ಬರೂ ಡಿಸಿಸಿ ಬ್ಯಾಂಕ್‌ನಲ್ಲಿ ಉಳಿತಾಯ ಖಾತೆ ತೆಗೆಯುವ ಮೂಲಕ ಠೇವಣಿ ಇಡಬೇಕು. ತಾಲ್ಲೂಕಿನಾದ್ಯಂತ ಇರುವ ಹಾಲು ಉತ್ಪಾದಕರ ಸಹಕಾರ ಸಂಘಗಳು ಖಾತೆಗಳನ್ನು ಡಿಸಿಸಿ ಬ್ಯಾಂಕ್‌ನಲ್ಲಿ ತೆರೆಯಿರಿ’ ಎಂದರು.

ADVERTISEMENT

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ. ನಾಗರಾಜ್ ಮಾತನಾಡಿ, ತಾಲ್ಲೂಕಿನ ಎಲ್ಲಾ ಎಂಪಿಸಿಎಸ್ ಖಾತೆಗಳನ್ನು ಡಿಸಿಸಿ ಬ್ಯಾಂಕ್‌ನಲ್ಲಿ ಮಾಡಿಸುವುದರಿಂದ ಈ ಭಾಗದ ರೈತರು ಸೇರಿದಂತೆ ಹಾಲು ಉತ್ಪಾದಕರಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದರು.

‘ಹಿಂದೆ ಏನೋ ಆಯ್ತು ಎಂದು ಈಗ ಡಿಸಿಸಿ ಬ್ಯಾಂಕ್‌ನಲ್ಲಿ ಹಣವಿಡಲು ಹಿಂಜರಿಯುವುದು ಸರಿಯಲ್ಲ. ಇದೀಗ ಬ್ಯಾಂಕ್ ತಾಲ್ಲೂಕಿಗೆ ಕೋಟ್ಯಂತರ ರೂಪಾಯಿಯ ಸಾಲ ನೀಡಿದೆ’ ಎಂದರು.

ಮಳಮಾಚನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎನ್. ಮುನಿಯಪ್ಪ, ಉಪಾಧ್ಯಕ್ಷ ತಿಮ್ಮಯ್ಯ, ಕೋಚಿಮುಲ್ ನಿರ್ದೇಶಕ ಆರ್. ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಎಸ್. ಆನಂದ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಂ. ಉಷಾರಾಣಿ, ಸಂಘದ ಆಡಳಿತ ಮಂಡಳಿ ಸದಸ್ಯರು
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.