
ಶಿಡ್ಲಘಟ್ಟ: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಮಂಗಳವಾರ ತಾಲ್ಲೂಕು ಪಂಚಾಯಿತಿ ಮಟ್ಟದ ಗ್ರಾಮೀಣ ಮಕ್ಕಳಿಗಾಗಿ ಚತುರ ಆಟಗಳ ಉತ್ಸವವನ್ನು ನಗರದ ಜೂನಿಯರ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾಯಿತು.
ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯ್ಕೆಯಾದ ವಿಜೇತರು ತಾಲ್ಲೂಕು ಮಟ್ಟದ ಚತುರ ಆಟಗಳ ಸ್ವರ್ಧೆಗಳಲ್ಲಿ ಭಾಗವಹಿಸಿದ್ದಾರೆ. ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು.
ಚದುರಂಗವು ಬುದ್ಧಿವಂತಿಕೆಯ ಆಟ. ಏಕಾಗ್ರತೆ, ಗುರಿ ತಲುಪುವ ಚಾಕಚಕ್ಯತೆಯನ್ನು ಚೆಸ್ ನಮಗೆ ಕಲಿಸಿಕೊಡುತ್ತದೆ ಎಂದರು.
ಚೆಸ್ ಸ್ಪರ್ಧೆಯಲ್ಲಿ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಕುದುಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಶಾಂಕ್ ಪ್ರಥಮ ಸ್ಥಾನ ಪಡೆದಿದ್ದಾರೆ. ನಾಗಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡಿಪಿನಾಯಕನಹಳ್ಳಿ ಗ್ರಾಮದ ನವೋದಯ ವಿದ್ಯಾಲಯದ ಶ್ರೀನಿವಾಸ್ ದ್ವಿತೀಯ ಮತ್ತು ನಡಿಪಿನಾಯಕನಹಳ್ಳಿ ಗ್ರಾಮದ ನವೋದಯ ವಿದ್ಯಾಲಯದ ಹರ್ಷವರ್ಧನ್ ತೃತೀಯ ಸ್ಥಾನ ಪಡೆದಿದ್ದಾರೆ.
ಕೇರಂನಲ್ಲಿ ಕೊತ್ತನೂರು ಗ್ರಾಮ ಪಂಚಾಯಿತಿ ನಿಖಿಲ್ ಪ್ರಥಮ ಸ್ಥಾನ, ಜಂಗಮಕೋಟೆ ಗ್ರಾಮ ಪಂಚಾಯಿತಿಯ ರಿಷಿ ದ್ವಿತೀಯ ಸ್ಥಾನ, ಚೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹೇಶ್ ಕುಮಾರ್ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಿದರು.
ಹೇಮಾವತಿ, ಚಂದ್ರಪ್ಪ, ತನ್ವೀರ್ ಅಹಮದ್, ದೇವೇಂದ್ರ, ಪ್ರಕಾಶ್ ಬಾಬು ಕೆ.ವಿ, ಅನ್ನಪೂರ್ಣ, ಚಂದ್ರಕಲಾ, ಮಂಜುಳಾ, ವೆಂಕಟಸ್ವಾಮಿ, ಮಂಜುನಾಥ, ದೇವಮ್ಮ, ಅಮರನಾಥ್, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ಸರ್ಕಾರಿ ಶಾಲಾ ಮಕ್ಕಳು, ಗ್ರಂಥಪಾಲಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.