ADVERTISEMENT

ಪೋತೇಪಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚಾಲನೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 5:33 IST
Last Updated 22 ಜುಲೈ 2025, 5:33 IST
ಬಾಗೇಪಲ್ಲಿ ತಾಲ್ಲೂಕಿನ ಪೋತೇಪಲ್ಲಿ ಕ್ರಾಸ್ ನಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ ನೆರವೇರಿಸಿದರು
ಬಾಗೇಪಲ್ಲಿ ತಾಲ್ಲೂಕಿನ ಪೋತೇಪಲ್ಲಿ ಕ್ರಾಸ್ ನಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ ನೆರವೇರಿಸಿದರು   

ಬಾಗೇಪಲ್ಲಿ: ಪೋತೇಪಲ್ಲಿ, ನಲ್ಲಪರೆಡ್ಡಿಪಲ್ಲಿ, ಜಿಲಾಜರ್ಲು, ರಾಯದುರ್ಗಂಪಲ್ಲಿ, ಗೌನಪಲ್ಲಿ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಯನ್ನು ₹70ಲಕ್ಷ ವೆಚ್ಚದಲ್ಲಿ ರಸ್ತೆ ಮಾಡಿಸಲಾಗುವುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ತಾಲ್ಲೂಕಿನ ಪೋತೇಪಲ್ಲಿ ಕ್ರಾಸ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಸ್ತೆ ಕಾಮಗಾರಿಗೆ ನಡೆದ ಭೂಮಿ ಪೂಜೆಯಲ್ಲಿ ಮಾತನಾಡಿದರು.

ಅನೇಕ ವರ್ಷಗಳಿಂದ ಕೆಲವು ಗ್ರಾಮಗಳಲ್ಲಿ ಮೂಲ ಸೌಕರ್ಯ ಕೊರತೆ ಇದೆ. ಇದೀಗ ರಸ್ತೆ ಮಾಡಲು ಸರ್ಕಾರದಿಂದ ₹35 ಲಕ್ಷ ಹಣ ಬಿಡುಗಡೆ ಆಗಿದೆ. ಉಳಿದ ₹35ಲಕ್ಷ ಹಣವನ್ನು ತಮ್ಮ ಶಾಸಕರ ನಿಧಿಯಿಂದ ಹಂಚಿಕೆ ಮಾಡಲಾಗುವುದು. ಕುಸಿತಗೊಂಡಿರುವ ಸೇತುವೆ, ರಸ್ತೆ ಗುಣಮಟ್ಟದಿಂದ ಮಾಡಲು ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ADVERTISEMENT

ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಸ್.ನರೇಂದ್ರ, ಪುರಸಭೆ ಅಧ್ಯಕ್ಷ ಎ.ಶ್ರೀನಿವಾಸ್, ಸದಸ್ಯ ಶ್ರೀನಿವಾಸರೆಡ್ಡಿ, ಕೆಡಿಪಿ ಸದಸ್ಯ ಪಿ.ಮಂಜುನಾಥರೆಡ್ಡಿ, ದರಖಾಸ್ತು ಸಮಿತಿ ಸದಸ್ಯ ಬೂರಗಮಡುಗು ನರಸಿಂಹಪ್ಪ, ಮುಖಂಡರಾದ ಕೃಷ್ಣಾರೆಡ್ಡಿ, ನಲ್ಲಪರೆಡ್ಡಿಪಲ್ಲಿ ಜಯರಾಮರೆಡ್ಡಿ, ಪೋತೇಪಲ್ಲಿ ಶ್ರೀರಾಮರೆಡ್ಡಿ, ಪಿ.ಎನ್.ಭಾಸ್ಕರರೆಡ್ಡಿ, ಪಿ.ಎನ್.ಶಂಕರರೆಡ್ಡಿ, ಶಿವಪ್ಪ, ಕೆ.ವಿ.ಶ್ರೀನಿವಾಸ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.