ADVERTISEMENT

ಬಾಗೇಪಲ್ಲಿ | ಸಾಂಬರ್‌ಗೆ ಬೆರೆಸಿದ ಪ್ರಕರಣ; ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 6:30 IST
Last Updated 17 ನವೆಂಬರ್ 2025, 6:30 IST
ವೆಂಕಟರವಣಪ್ಪ,
ವೆಂಕಟರವಣಪ್ಪ,   

ಬಾಗೇಪಲ್ಲಿ: ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಸಾಂಬರ್‌ಗೆ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ತಾಲ್ಲೂಕಿನ ಗರುಡಾಚಾರ್ಲಪಲ್ಲಿ ಗ್ರಾಮದ ವೆಂಕಟರವಣಪ್ಪನನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ.

 ಗುಡಿಬಂಡೆ ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿಯ ಬ್ರಾಹ್ಮಣಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಜೊತೆ ಮಾತುಕತೆ ಮಾಡಿ, ವೆಂಕಟರವಣಪ್ಪ ಬಳಿ ಆರೋಪಿ ಪಾಪಿರೆಡ್ಡಿ ₹ 10 ಸಾವಿರ ನೀಡಿ ವಿಷದ ಮಾತ್ರೆಗಳನ್ನು ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವೆಂಕಟರಮಪ್ಪ ಮನೆಗೆ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶಾಂತ್ ವರ್ಣಿ ಹಾಗೂ ಪೊಲೀಸರು ದಾಳಿ ಮಾಡಿ ಪರಿಶೀಲಿಸಿದರು. ಮನೆಯಲ್ಲಿ ನಾಟಿ ಔಷಧಿ ತಯಾರಿಸುವ ಯಂತ್ರಗಳನ್ನು, ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.