ADVERTISEMENT

ಚಿಂತಾಮಣಿ | ಶ್ರೀಗಂಧದ ಮರಗಳ ಕಳ್ಳತನ: ದೂರು

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2024, 14:43 IST
Last Updated 25 ಫೆಬ್ರುವರಿ 2024, 14:43 IST

ಚಿಂತಾಮಣಿ: ತಮ್ಮ ಶ್ರೀಗಂಧದ ತೋಟದಿಂದ ಆರು ಶ್ರೀಗಂಧದ ಮರಗಳು ಕಳ್ಳತನವಾಗಿವೆ ಎಂದು ಆರೋಪಿಸಿ ತಾಲ್ಲೂಕಿನ ಕಸಬಾ ಹೋಬಳಿಯ ಸಿಂಗಸಂದ್ರ ಗ್ರಾಮದ ವೆಂಕಟರಾಮರೆಡ್ಡಿ ಎಂಬುವರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಅರಣ್ಯ ಇಲಾಖೆ ಅನುಮತಿ ಪಡೆದು, ಮರಿಮಾಕಲಹಳ್ಳಿಯ ನನ್ನ ಜಮೀನಿನಲ್ಲಿ ಒಂಬತ್ತು ವರ್ಷಗಳ ಹಿಂದೆ 170 ಶ್ರೀಗಂಧದ ಸಸಿಗಳನ್ನು ನಾಟಿ ಮಾಡಿ ಬೆಳೆಸಿದ್ದೆ. ಆದರೆ, ಫೆಬ್ರುವರಿ 24ರಂದು ಬೆಳಿಗ್ಗೆ ಒಂಬತ್ತು ಗಂಟೆಗೆ ಜಮೀನಿನ ಬಳಿ ಬಂದಾಗ 170 ಮರಗಳ ಪೈಕಿ ಆರು ಮರಗಳನ್ನು ಗರಗಸದಿಂದ ಕತ್ತರಿಸಿ ಕಳ್ಳತನ ಮಾಡಿಕೊಂಡು ಹೋಗಿರುವುದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ ಕಳ್ಳತನ ಮಾಡಿಕೊಂಡು ಹೋಗಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.