ಶಿಡ್ಲಘಟ್ಟ: ತಾಲ್ಲೂಕಿನ ತುಮ್ಮನಹಳ್ಳಿ ಕ್ಲಸ್ಟರ್‌ನ ಕನ್ನಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಯಿತು.
ಕ್ಷೇತ್ರ ಸಮನ್ವಯಾಧಿಕಾರಿ ಲಕ್ಷ್ಮಿನಾರಾಯಣ್ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಭೂತ ಸವಲತ್ತುಗಳು ಒಳಗೊಂಡಂತೆ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ ಪೋಷಕರನ್ನು ಖಾಸಗಿ ಶಾಲೆಗಳ ವ್ಯಾಮೋಹ ವ್ಯಾಪಿಸಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿರುವುದು ಆತಂಕಕಾರಿ’ ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ, ಮಕ್ಕಳ ಪೋಷಕರಲ್ಲಿ ಮಾತ್ರ ಖಾಸಗಿ ಶಾಲೆಗಳ ಕುರಿತಾದ ವ್ಯಾಮೋಹ ಕಡಿಮೆಯಾಗಿಲ್ಲ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದು ಹೇಳಿದರು.
ಶಾಲಾ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ರಂಜಿಸಿದವು.
ಈ ಸಂದರ್ಭದಲ್ಲಿ ಬಿ.ಆರ್.ಸಿ ಮಂಜುನಾಥ್, ಮುಖ್ಯ ಶಿಕ್ಷಕ ಶ್ರೀನಿವಾಸ್‌ಯಾದವ್, ಸರಸ್ವತಿ, ತುಮಕೂರು ವಿವಿಯ ಸಿಂಡಿಕೇಟ್ ಸದಸ್ಯ ದೇವರಾಜ್, ಸ್ನೇಹ ಯುವಕರ ಸಂಘದ ವಸಂತ ವಲ್ಲಭಕುಮಾರ್, ಎಸ್‌ಡಿಎಂಸಿ ಅಧ್ಯಕ್ಷೆ ಮಂಜುಳಮ್ಮ, ಉಪಾಧ್ಯಕ್ಷ ಸುಬ್ರಮಣಿ, ಸಹಶಿಕ್ಷಕ ಶಿವಶಂಕರ, ಸುನಿತಾ, ಮಂಜುಳ, ಶ್ರೀನಿವಾಸರಾವ್, ವೆಂಕಟೇಶಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.