
ಬಾಗೇಪಲ್ಲಿ: ಪಟ್ಟಣದಲ್ಲಿ ಶನಿವಾರ ಸಂಯಮ ಶಾಲೆಯ ದಶಮಾನೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ನಡೆಸಿಕೊಟ್ಟ ನೃತ್ಯ ಪ್ರೇಕ್ಷಕರ ಗಮನಸೆಳೆಯಿತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಕೆ.ಎಂ.ನಯಾಜ್ ಅಹಮದ್ ಮಾತನಾಡಿ, ಶಾಲೆಗಳಲ್ಲಿ ಹಾಗೂ ಮನೆಗಳಲ್ಲಿ ಕಲಿಸಿದ ನೈತಿಕ ಮತ್ತು ಮೌಲ್ಯಾಧಾರಿತ ಶಿಕ್ಷಣವು ಮಕ್ಕಳ ಸರ್ವತೋಮುಖ ಪ್ರಗತಿ ಆಗುತ್ತದೆ. ಶಾಲೆಗಳು ಅಧ್ಯಯನದ ಕೇಂದ್ರಗಳು ಆಗಬೇಕು. ಪ್ರಾಥಮಿಕ ಶಿಕ್ಷಣದಿಂದಲೇ ಮಕ್ಕಳಿಗೆ ಶಿಕ್ಷಣ ಕಲಿಕೆಯ ಜೊತೆಗೆ ಸಮಾಜದ ಆಗುಹೋಗುಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿದರು. ಪ್ರಸೂತಿ ವೈದ್ಯ ಡಾ.ರವೀಂದ್ರರೆಡ್ಡಿ, ಡಿ.ಎನ್.ಕೃಷ್ಣಾರೆಡ್ಡಿ, ಮಂಗಮ್ಮ, ಬಿ.ವಿ.ಕಿಶೋರ್ ಕುಮಾರ್, ಮಮತಾರಾಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.