ಚಿಂತಾಮಣಿ: ತಾಲ್ಲೂಕಿನ ಕೈವಾರ ಹೋಬಳಿಯ ಗುಟ್ಟಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಸಡಗರ ಸಂಭ್ರಮದಿಂದ ನಡೆಯಿತು.
ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮುಖ್ಯ ಶಿಕ್ಷಕ ಮಸ್ತನವಲಿ ಮಕ್ಕಳಿಗೆ ಗುಲಾಬಿ ಹೂವು ಮತ್ತು ಪಠ್ಯಪುಸ್ತಕ ನೀಡಿ ಬರಮಾಡಿಕೊಂಡರು. ಮಧ್ಯಾಹ್ನ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.
ಕಳೆದ ಎರಡು ತಿಂಗಳಿಂದ ರಜೆಯಲ್ಲಿದ್ದ ಮಕ್ಕಳು ಖುಷಿಯಾಗಿ ಶಾಲೆಗೆ ಆಗಮಿಸಿ ಸ್ನೇಹಿತರ ಜತೆ ಬೆರೆತರು. ಆಟ–ಪಾಠಗಳಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡರು.
ಕೈವಾರ ಅಂಬೇಡ್ಕರ್ ಅನುದಾನಿತ ಶಾಲೆ: ತಾಲ್ಲೂಕಿನ ಕೈವಾರದ ಅಂಬೇಡ್ಕರ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಮಾಡಲಾಯಿತು. ಶಾಲೆಯನ್ನು ತಳಿರು ತೋರಣ, ರಂಗೋಲಿ ಮತ್ತು ಬಲೂನ್‌ಗಳಿಂದ ಅಲಂಕರಿಸಲಾಗಿತ್ತು.
ಸಂಸ್ಥೆಯ ಅಧ್ಯಕ್ಷೆ ಎಸ್.ಎಂ ರೋಜ ಮತ್ತು ಶಿಕ್ಷಕರು ಮಕ್ಕಳಿಗೆ ಹೂವು ನೀಡಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಸುರೇಶ ಪಠ್ಯಪುಸ್ತಕ ನೀಡಿ ಬರಮಾಡಿಕೊಂಡರು.
ಮೊದಲು ದಿನ ಮಧ್ಯಾಹ್ನ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಶಿಕ್ಷಕ ಲೋಕೇಶಪ್ಪ, ಉಮೇಶ, ಶ್ರೀಧರ ಹಿರೇಮಠ, ಮಂಜುಳ, ಗೋಪಮ್ಮ, ಭಾಗ್ಯಮ್ಮ, ದಿವ್ಯ, ಯೋಗಮ್ಮ, ವೆಂಕಟರತ್ನಮ್ಮ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.