ADVERTISEMENT

ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2024, 14:13 IST
Last Updated 9 ಮಾರ್ಚ್ 2024, 14:13 IST
ಚಿಂತಾಮಣಿಯ ಆರ್.ಕೆ.ವಿಷನ್ ಶಾಲೆಯಲ್ಲಿ ಶನಿವಾರ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಯಾರು ಮಾಡಿರುವ ಮಾದರಿ
ಚಿಂತಾಮಣಿಯ ಆರ್.ಕೆ.ವಿಷನ್ ಶಾಲೆಯಲ್ಲಿ ಶನಿವಾರ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಯಾರು ಮಾಡಿರುವ ಮಾದರಿ   

ಚಿಂತಾಮಣಿ: ನಗರದ ಹೊರವಲಯದ ಬೆಂಗಳೂರು ರಸ್ತೆಯಲ್ಲಿರುವ ಆರ್.ಕೆ.ವಿಷನ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ಸಂಸ್ಥೆಯ ಕಾರ್ಯದರ್ಶಿ ಕೆ.ಆರ್. ಪ್ರೇಮಲತ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಿದರು.

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಮಳೆ ನೀರು ಸಂಗ್ರಹ, ನೀರಿನ ಶುದ್ಧೀಕರಣ, ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಸ್ಕ್ಯಾನರ್, ನೀರಿನ ಟ್ಯಾಂಕರ್ ಅಲಾರಮ್ ಮುಂತಾದ 20ಕ್ಕೂ ಹೆಚ್ಚು ವಿಜ್ಞಾನ ಮಾದರಿ ಪ್ರದರ್ಶಿಸಿದರು.

ಸಂಸ್ಥೆಯ ನಿರ್ದೇಶಕ ಜಿ.ವಿ.ಕೆ.ರೆಡ್ಡಿ, ಆಡಳಿತ ಮಂಡಳಿಯ ಕೆ.ವಿ.ವರುಣ್, ತನುಶ್ರೀರಾಮ್, ಪ್ರಾಂಶುಪಾಲ ಬಿ.ದುರ್ಗಾಪ್ರಸಾದ್‌ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.