ADVERTISEMENT

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; 20 ವರ್ಷ ಕಠಿಣ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2022, 12:43 IST
Last Updated 24 ಮಾರ್ಚ್ 2022, 12:43 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಚಿಕ್ಕಬಳ್ಳಾಪುರ: ಕಳೆದ ವರ್ಷ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿದ್ದ ಗೌರಿಬಿದನೂರು ತಾಲ್ಲೂಕಿನ ಗೆದರೆ ಗ್ರಾಮದ ಯುವಕರಿಬ್ಬರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ತಲಾ 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

ಗೆದರೆ ಗ್ರಾಮದ ಅಶೋಕ (23) ಮತ್ತು ಲೋಕೇಶ (23) ಎಂಬ ಸ್ನೇಹಿತರುಕಳೆದ ಏಪ್ರಿಲ್‌ನಲ್ಲಿ ಬಾಲಕನೊಬ್ಬನಿಂದ ಮನೆಗೆ ಸಿಗರೇಟ್‌ ತರಸಿಕೊಂಡಿದ್ದರು. ಅದೇ ವೇಳೆ ಆತನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು. ಆ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು.

ಇಬ್ಬರ ವಿರುದ್ಧ ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ADVERTISEMENT

ಆರೋಪ ಸಾಬೀತಾದ ಹಿನ್ನೆಲೆಯಲ್ಲಿನ್ಯಾಯಾಧೀಶೆ ಬಿ.ಸಿ.ಭಾನುಮತಿ ಅವರು ಈ ಇಬ್ಬರಿಗೂ ತಲಾ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹ 50 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡದ ಹಣ ₹1 ಲಕ್ಷವನ್ನು ಸಂತ್ರಸ್ತ ಬಾಲಕನಿಗೆ ನೀಡಲು ಆದೇಶಿಸಿದ್ದಾರೆ.ಬಾಲಕನಿಗೆ ಪರಿಹಾರ ರೂಪದಲ್ಲಿ ₹2ಲಕ್ಷ ನೀಡುವಂತೆಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದಾರೆ. ಸರ್ಕಾರದ ಪರ ಆರ್.ರವಿಚಂದ್ರ ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.