ADVERTISEMENT

ಎಸ್‌ಎಫ್‌ಐ ಸಮ್ಮೇಳನಭಿತ್ತಿಪತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2022, 6:57 IST
Last Updated 13 ಡಿಸೆಂಬರ್ 2022, 6:57 IST
ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ನ 17ನೇ ಅಖಿಲ ಭಾರತ ಸಮ್ಮೇಳನದ ಪೋಸ್ಟರ್‌ಗಳನ್ನು ಅಖಿಲ ಭಾರತ ಜಂಟಿ ಕಾರ್ಯದರ್ಶಿ ವಿನುಶ್ ಬಿಡುಗಡೆ ಮಾಡಿದರು
ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ನ 17ನೇ ಅಖಿಲ ಭಾರತ ಸಮ್ಮೇಳನದ ಪೋಸ್ಟರ್‌ಗಳನ್ನು ಅಖಿಲ ಭಾರತ ಜಂಟಿ ಕಾರ್ಯದರ್ಶಿ ವಿನುಶ್ ಬಿಡುಗಡೆ ಮಾಡಿದರು   

ಬಾಗೇಪಲ್ಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದ್ದು, ಸರ್ವರಿಗೂ ಶಿಕ್ಷಣ ಹಾಗೂ ಉದ್ಯೋಗಾವಕಾಶ ಸಿಗಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್‌ನ ಅಖಿಲ ಭಾರತ ಜಂಟಿ ಕಾರ್ಯದರ್ಶಿ ವಿನುಶ್ ಹೇಳಿದರು.

ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಭಾರತ ವಿದ್ಯಾರ್ಥಿ ಫೆಡರೇಷನ್‌ನ 17ನೇ ಅಖಿಲ ಭಾರತ ಸಮ್ಮೇಳನದ ಭಾಗವಾಗಿ ಭಾನುವಾರ ಸಂಜೆ ಕೇರಳದಿಂದ ಬಾಗೇಪಲ್ಲಿಗೆ ಆಗಮಿಸಿದ ಎಸ್‌ಎಫ್‌ಐನ ಫ್ಲಾಗ್ ಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣವನ್ನು ವ್ಯಾಪಾರೀಕರಣ, ಖಾಸಗೀಕರಣ,ಉದಾರೀಕರಣ ಮಾಡುತ್ತಿವೆ. ಇದರಿಂದ ಶ್ರೀಮಂತರ ಮಕ್ಕಳಿಗೆ ಶಿಕ್ಷಣ ಮಾತ್ರ ಸಿಗುತ್ತಿದ್ದು ಬಡವರ ಮಕ್ಕಳಿಗೆ ಶಿಕ್ಷಣ ಸಿಗುತ್ತಿಲ್ಲ. ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಿದ್ದು, ಈ ನೀತಿಯಿಂದ ಬಡಮಕ್ಕಳಿಗೆ ಅನುಕೂಲ ಇಲ್ಲ. ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವೆ ಬಡವ-ಶ್ರೀಮಂತರು ಎಂಬ ಬೇಧಭಾವ ತೋರಿದೆ ಎಂದರು.

ADVERTISEMENT

ದೇಶದಲ್ಲಿನ ಎಲ್ಲರಿಗೂ ಸಮಾನ ಶಿಕ್ಷಣ ಹಾಗೂ ಉದ್ಯೋಗ ಸಿಗಬೇಕು ಎಂದು ಸೇರಿದಂತೆ ವಿವಿಧ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸರ್ಕಾರಗಳ ವಿದ್ಯಾರ್ಥಿ ನೀತಿಗಳ ವಿರುದ್ಧ ಹೈದರಾಬಾದ್‌ನಲ್ಲಿ 17ನೇ ಅಖಿಲ ಭಾರತ ಸಮ್ಮೇಳನವನ್ನು ಹಮ್ಮಿಕೊಂಡಿದ್ದು, ಚರ್ಚಿಸಲಾಗುವುದು ಎಂದು ತಿಳಿಸಿದರು.

ಎಸ್‌ಎಫ್‌ಐ ರಾಜ್ಯ ಸಮಿತಿ ಅಧ್ಯಕ್ಷ ಅಮರೇಶ್ ಮಾತನಾಡಿ, ‘ರಾಜ್ಯದಲ್ಲಿ ರಾಷ್ಟ್ರಿಯ ಶಿಕ್ಷಣ ನೀತಿ ಜಾರಿಯಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ರಾಜ್ಯ ಬಿಜೆಪಿ ಸರ್ಕಾರ ಶಿಕ್ಷಣವನ್ನು ಕೇಸರೀಕರಣ ಮಾಡಲು ಹೊರಟಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹೆಸರಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವೆ ಕಂದಕಸೃಷ್ಟಿ ಮಾಡಿದೆ ಎಂದರು.

ಕಾರ್ಯಕ್ರಮದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ನ ಕೇರಳದ ಸಮಿತಿ ಸದಸ್ಯ ಆದರ್ಶ್, ಕೇರಳ ರಾಜ್ಯ ಸಮಿತಿ ಅಧ್ಯಕ್ಷ ಅಕ್ಷಯ್, ಜಿಲ್ಲಾ ಸಮಿತಿ ಅಧ್ಯಕ್ಷ ಸೋಮಶೇಖರ, ಸಿಪಿಎಂ ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ, ತಾಲ್ಲೂಕು ಕಾರ್ಯದರ್ಶಿ ಮಹಮದ್ ಅಕ್ರಂ, ನಗರ ಸಮಿತಿ ಕಾರ್ಯದರ್ಶಿ ಅಶ್ವತ್ಥಪ್ಪ, ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ರಘುರಾಮರೆಡ್ಡಿ, ಜಿ.ಮುಸ್ತಾಫ, ಜುಬೇರ್ ಅಹಮದ್, ಗೋವರ್ಧನಚಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.