
ಶಿಡ್ಲಘಟ್ಟ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಬದುಕಿನ ಪ್ರತಿ ಕ್ಷಣವನ್ನೂ ಕೂಡ ವ್ಯರ್ಥ ಮಾಡದೆ ಓದು ಬರಹದೊಂದಿಗೆ ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕೆಎಂಎಫ್ ಮಾಜಿ ನಿರ್ದೇಶಕ ಆರ್.ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಲಕ್ಷ್ಮಿ ವಿದ್ಯಾನಿಕೇತನ ಶಾಲೆಯಲ್ಲಿ ಭಾನುವಾರ ನಡೆದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಿಂದ ಕನ್ನಡ ಗೀತೆ ಗಾಯನ, ನೃತ್ಯದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಕಾಂತಾರ ಚಿತ್ರದ ಹಾಡಿನ ನೃತ್ಯ ಗಮನ ಸೆಳೆಯಿತು. ಚಿತ್ರ ನಟ ಅವಿನಾಶ್, ನಟಿ ನಿಸರ್ಗನಾಗಪ್ಪ ವಿದ್ಯಾರ್ಥಿಗಳೊಂದಿಗೆ ನೃತ್ಯ ಮಾಡಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ಬ್ಯಾಟರಾಯಶೆಟ್ಟಿ, ಅರಿಕೆರೆ ಮುನಿರಾಜು, ದೇವರಾಜ್, ಭಾಗ್ಯಮ್ಮ, ವನಜಾಕ್ಷಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.