ADVERTISEMENT

ಶಿಡ್ಲಘಟ್ಟ | ಸಹಕಾರ ಸಪ್ತಾಹ ಚರ್ಚಾ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 7:22 IST
Last Updated 15 ಡಿಸೆಂಬರ್ 2025, 7:22 IST
ಶಿಡ್ಲಘಟ್ಟ ತಾಲ್ಲೂಕು ಬೂದಾಳದ ರಾಯಲ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವೈ.ಎಂ. ಗಾನವಿ ಸಹಕಾರ ಸಪ್ತಾಹದ ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದರು
ಶಿಡ್ಲಘಟ್ಟ ತಾಲ್ಲೂಕು ಬೂದಾಳದ ರಾಯಲ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವೈ.ಎಂ. ಗಾನವಿ ಸಹಕಾರ ಸಪ್ತಾಹದ ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದರು   

ಶಿಡ್ಲಘಟ್ಟ: ಸಹಕಾರ ಸಪ್ತಾಹದ ಅಂಗವಾಗಿ ಕರ್ನಾಟಕ ರಾಜ್ಯ ಸಹಕಾರು ಮಹಾ ಮಂಡಳ ಮತ್ತು ಜಿಲ್ಲಾ ಸಹಕಾರ ಒಕ್ಕೂಟದಿಂದ ಸಪ್ತಾಹದ ಕುರಿತು ಜಿಲ್ಲಾ ಮಟ್ಟದ ಚರ್ಚಾ ಸ್ಪರ್ದೆಯಲ್ಲಿ ರಾಯಲ್ ಪಬ್ಲಿಕ್ ಸ್ಕೂಲ್ ಮತ್ತು ಪಿಯು ಕಾಲೇಜಿನ ವಿದ್ಯಾರ್ಥಿನಿ ವೈ.ಎಂ. ಗಾನವಿ ದ್ವಿತೀಯ ಬಹುಮಾನ ಪಡೆದಿದ್ದಾರೆ. 

ಮುಖ್ಯೋಪಾಧ್ಯಾಯ ಮಂಜುನಾಥ್ ಮಾತನಾಡಿ, ‘ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗಬಾರದು. ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚು ಮಹತ್ವ ನೀಡಬೇಕು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಪರಿಪೂರ್ಣವಾಗಿ ರೂಪಿಸಲು ಸಹಕಾರಿಯಾಗಿವೆ’ ಎಂದು ಹೇಳಿದರು. 

ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಯನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿಸುತ್ತವೆ ಎಂದರು. 

ADVERTISEMENT

ಶಾಲಾ ಕಾಲೇಜು ಮಕ್ಕಳಲ್ಲಿ ಸಹಕಾರ ವ್ಯವಸ್ಥೆ ಬಗ್ಗೆ ಜಾಗೃತಿ ಮೂಡಿಸಲು ಸಹಕಾರ ಮಹಾ ಮಂಡಳವು ಚರ್ಚಾ ಸ್ಪರ್ಧೆ ಹಮ್ಮಿಕೊಂಡಿತ್ತು. 

ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.