ADVERTISEMENT

ಶಿಡ್ಲಘಟ್ಟ: 17 ಮಂದಿ ವರದಿ ನೆಗೆಟಿವ್

​ಪ್ರಜಾವಾಣಿ ವಾರ್ತೆ
Published 19 ಮೇ 2020, 17:01 IST
Last Updated 19 ಮೇ 2020, 17:01 IST

ಶಿಡ್ಲಘಟ್ಟ: ತಾಲ್ಲೂಕಿನ ಮಳ್ಳೂರಿಗೆ ಬಂದು ಹೋಗಿದ್ದ ವ್ಯಕ್ತಿಗೆ ಕೋವಿಡ್‌–19 ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಸಂಪರ್ಕಕ್ಕೆ ಬಂದಿದ್ದ 17 ಮಂದಿಯನ್ನು ಶನಿವಾರ ರಾತ್ರಿ ಕ್ಯಾರಂಟೈನ್‌ನಲ್ಲಿ ಇರಿಸಲಾಗಿತ್ತು. ಇವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಮಂಗಳವಾರ ವರದಿ ಬಂದಿದ್ದು, ಯಾರಿಗೂ ಸೋಂಕು ದೃಢಪಟ್ಟಿಲ್ಲ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.

17 ಜನರನ್ನು ಮನೆಗೆ ಕಳುಹಿಸಿದ್ದು, 14 ದಿನ ಹೋಂ ಕ್ವಾರಂಟೈನ್‌ಲ್ಲಿರುವಂತೆ ಸೂಚಿಸಲಾಗಿದೆ. 12 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುವುದು ಎಂದು ತಾಲ್ಲೂಕು ಆಡಳಿತ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT