
ಶಿಡ್ಲಘಟ್ಟ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎ.ಶಶಿಕುಮಾರ್ ಆಯ್ಕೆಯಾಗಿದ್ದಾರೆ
ಶಿಡ್ಲಘಟ್ಟ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷರಾಗಿ ಎ.ಶಶಿಕುಮಾರ್ ಆಯ್ಕೆಯಾಗಿದ್ದಾರೆ.
ಶಿಡ್ಲಘಟ್ಟದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ ಸೊ.ಸು.ನಾಗೇಂದ್ರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ನವಮೋಹನ್, ದೇವರಾಜ್ ನೇತೃತ್ವದಲ್ಲಿ ಭಾನುವಾರ ಪತ್ರಕರ್ತರ ಸಂಘದ ಅಧ್ಯಕ್ಷರ ಆಯ್ಕೆ ಸಂಬಂಧ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಎ.ಶಶಿಕುಮಾರ್ 10 ಮತ, ಎನ್.ಇ.ಜಗದೀಶ್ ಬಾಬು 7 ಮತ ಪಡೆದರು.
ಉಪಾಧ್ಯಕ್ಷರಾಗಿ ಎನ್.ಇ.ಜಗದೀಶ್ ಬಾಬು, ಪ್ರಧಾನ ಕಾರ್ಯದರ್ಶಿ ಎಸ್.ಮಂಜುನಾಥ್, ಕಾರ್ಯದರ್ಶಿ ಬಿ.ವಿ.ಲೋಕೇಶ್, ಖಜಾಂಚಿ ವೆಂಕಟೇಶ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿ.ಇ.ಕರಗಪ್ಪ, ಇ.ನರಸಿಂಹಗೌಡ, ಎನ್.ನಾರಾಯಣಸ್ವಾಮಿ, ಎನ್.ಮಹೇಶ್, ಎನ್.ವಿ.ಶಿವಕುಮಾರ್, ಆರ್.ರಾಜೇಶ್ ಅವಿರೋಧವಾಗಿ ಆಯ್ಕೆಯಾದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ಉಪಾಧ್ಯಕ್ಷ ಮುಬಶಿರ್ ಅಹಮ್ಮದ್, ಜಿಲ್ಲಾ ಕಾರ್ಯದರ್ಶಿ ಡಿ.ಜಿ.ಮಲ್ಲಿಕಾರ್ಜುನ, ಕಾರ್ಯಕಾರಿ ಸಮಿತಿ ಸದಸ್ಯ ಕೆ.ವಿ.ಮುನೇಗೌಡ, ಛಾಯಾ ರಮೇಶ್, ಮಿಥುನ್ ಕುಮಾರ್ ಹಾಗೂ ತಮೀಮ್ ಪಾಷ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.