ಶಿಡ್ಲಘಟ್ಟ: ಜಿಲ್ಲೆಯಲ್ಲಿ ದಲಿತರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಿಹಾರ ಕಲ್ಪಿಸುವ ಸಲುವಾಗಿ ಶೀಘ್ರದಲ್ಲಿ ಮುಖಂಡರ ಸಭೆ ಕರೆಯಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಭರವಸೆ ನೀಡಿದ್ದಾರೆ.
ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್ ನೇತೃತ್ವದಲ್ಲಿ ಭೇಟಿನೀಡಿ ಮನವಿ ಸ್ವೀಕರಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ದಲಿತರ ಸಮಸ್ಯೆಗಳನ್ನು ಆಲಿಸಿ ಶಾಶ್ವತ ಪರಿಹಾರ ಕಲ್ಪಿಸುವ ಸಲುವಾಗಿ ಸಭೆ ಕರೆಯಲಾಗುವುದು. ದಲಿತ ಮುಖಂಡರು ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾ ಪಂಚಾಯಿತಿಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಸರ್ಕಾರಗಳ ಯೋಜನೆ ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಕೋನದಿಂದ ಸಲಹೆ ಸೂಚನೆ ಆಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯ ಎಂ ವೇಣು, ಮುನಿವೆಂಕಟಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.