ADVERTISEMENT

ಶಿಡ್ಲಘಟ್ಟ: ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2025, 16:16 IST
Last Updated 10 ಜೂನ್ 2025, 16:16 IST
ಶಿಡ್ಲಘಟ್ಟದ ಅಕ್ಷರ ಪಿ.ಯು ಕಾಲೇಜಿನಲ್ಲಿ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು
ಶಿಡ್ಲಘಟ್ಟದ ಅಕ್ಷರ ಪಿ.ಯು ಕಾಲೇಜಿನಲ್ಲಿ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು   

ಶಿಡ್ಲಘಟ್ಟ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಅಕ್ಷರ ಪಿ.ಯು ಕಾಲೇಜು ಇವರ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಹಾಗೂ ನವ ಮೈಸೂರಿನ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನಾಚರಣೆ ಹಾಗೂ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಮಂಗಳವಾರ ನಡೆಸಲಾಯಿತು.

ಕಾರ್ಯಕ್ರಮದ ಅಂಗವಾಗಿ ‘ಆಧುನಿಕ ನವ ಮೈಸೂರಿನ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆಗಳು’ ಎಂಬ ವಿಷಯವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಪ್ರಮಾಣಪತ್ರ ನೀಡಲಾಯಿತು.

ತಾಲ್ಲೂಕು ಕಸಾಪ ಅಧ್ಯಕ್ಷ ನಾರಾಯಣಸ್ವಾಮಿ, ಅಕ್ಷರ ಪಿಯು ಕಾಲೇಜಿನ ಪ್ರಾಂಶುಪಾಲ ಬಿ. ವಿ. ಪ್ರಕಾಶ್, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಎಸ್.ವಿ.ನಾಗರಾಜರಾವ್, ಎಚ್.ಎಂ.ರಂಗನಾಥ್, ಮುನಿನಾರಾಯಣಪ್ಪ, ಟಿ.ಟಿ.ನರಸಿಂಹಪ್ಪ, ಸುರೇಶ್, ದೇವರಾಜ್, ಎನ್.ಸುಂದರ್, ರಮೇಶ್, ಶುಭ, ಚಂದ್ರಶೇಖರ್, ಕಮಲ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.