ಶಿಡ್ಲಘಟ್ಟ: ಸರ್ಕಾರಿ ನೌಕರರ ಸುಮಾರು ವರ್ಷಗಳ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಮಾದರಿ ಸರ್ಕಾರಿ ನೌಕರರ ಭವನ ನಿರ್ಮಾಣ ಮಾಡಲಾಗುವುದು ಎಂದು ತಾಲ್ಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಹೇಳಿದರು.
ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ಸರ್ಕಾರಿ ನೌಕರರ ಭವನದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ, ಸರ್ಕಾರಿ ನೌಕರರ ಭವನ ಹಾಗೂ ಗುರುಭವನ ಕಾಮಗಾರಿ ಆರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ ಸುಧಾಕರ್ ಹಾಗೂ ಶಾಸಕ ಮೇಲೂರು ರವಿಕುಮಾರ್ ಭೂಮಿಪೂಜೆ ನೆರವೇರಿಸಿದ್ದರು. ಶಾಸಕ ರವಿಕುಮಾರ್ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹20 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ. ಅನುದಾನದ ಅಗತ್ಯವಿದ್ದು ಸಂಸದ ಹಾಗೂ ವಿಧಾನಪರಿಷತ್ ಸದಸ್ಯರ ಸಹಕಾರದಿಂದ ಸರ್ಕಾರಿ ನೌಕರರ ಭವನ ಮಾದರಿಯಾಗಿ ನಿರ್ಮಿಸಲಾಗುವುದು ಎಂದರು.
ಮೂರು ಅಂತಸ್ತಿನ ಕಟ್ಟಡ ತಲೆ ಎತ್ತಲಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ಮತ್ತು ಪದಾಧಿಕಾರಿಗಳು ಸಂಕಲ್ಪ ಮಾಡಿದ್ದು ಅದಕ್ಕಾಗಿ ಇನ್ನಷ್ಟು ಅನುದಾನ ಕ್ರೋಡೀಕರಿಸಲು ಸಿದ್ಧತೆ ನಡೆಸಿದ್ದಾರೆ.
ತಹಶೀಲ್ದಾರ್ ಗಗನ ಸಿಂಧು, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಅಕ್ಕಲರೆಡ್ಡಿ, ಮಧುಸೂದನ್, ಅಪ್ಪೇಗೌಡನಹಳ್ಳಿ ಕೆಂಪೇಗೌಡ, ವಸಂತ್ ಕುಮಾರ್, ಟಿ. ಟಿ. ನರಸಿಂಹಪ್ಪ, ಗಜೇಂದ್ರ, ನರಸಿಂಹರಾಜು, ರವಿ, ಮಂಜುಳಾ, ನರೇಂದ್ರ ಕುಮಾರ್, ತಿಮ್ಮರಾಜು, ಎಲ್.ವಿ. ವೆಂಕಟರೆಡ್ಡಿ, ಅರುಣಮ್ಮ, ಲಲಿತಮ್ಮ ಟಿಪ್ಪು ಸುಲ್ತಾನ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.