ADVERTISEMENT

ಚಿಕ್ಕಬಳ್ಳಾಪುರ | ಶ್ರಾವಣ ಶನಿವಾರ, ದೇಗುಲಗಳಲ್ಲಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 14:03 IST
Last Updated 8 ಆಗಸ್ಟ್ 2020, 14:03 IST
ಚಿಕ್ಕಬಳ್ಳಾಪುರ ಹೊರವಲಯದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿಶೇಷ ಪೂಜೆ ಸಲ್ಲಿಸಿದರು.
ಚಿಕ್ಕಬಳ್ಳಾಪುರ ಹೊರವಲಯದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿಶೇಷ ಪೂಜೆ ಸಲ್ಲಿಸಿದರು.   

ಚಿಕ್ಕಬಳ್ಳಾಪುರ: ಶ್ರಾವಣ ಮಾಸದ ಮೂರನೇ ಶನಿವಾರದ ಪ್ರಯುಕ್ತ ನಗರದ ಕಂದವಾರ ಬಾಗಿಲು ಬಳಿ ಇರುವ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಅನೇಕ ದೇವಸ್ಥಾನಗಳಲ್ಲಿ ಭಕ್ತರು ಬೆಳಿಗ್ಗೆಯಿಂದಲೇ ದರ್ಶನ ಪಡೆಯುತ್ತಿದ್ದ ದೃಶ್ಯಗಳು ಕಂಡುಬಂದವು.

ಬಿ.ಬಿ.ರಸ್ತೆಯಲ್ಲಿರುವ ಶನೈಶ್ವರ ಸ್ವಾಮಿ ದೇವಾಲಯ, ಕಂದವಾರ ಪೇಟೆಯಲ್ಲಿರುವ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನ, ಗಂಗಮ್ಮನಗುಡಿ ರಸ್ತೆಯಲ್ಲಿರುವ ವಾಸವಿ ದೇವಾಲಯ ಸೇರಿದಂತೆ ನಗರದ ವಿವಿಧೆಡೆ ಇರುವ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಭಕ್ತರು ಪೂಜೆ ಸಲ್ಲಿಸಿ, ದರ್ಶನ ಪಡೆದರು.

ಶನಿವಾರ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸುವ ಜತೆಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಜತೆಗೆ ತೀರ್ಥ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಭಕ್ತರು ದೈವದ ಚಿನ್ಹೆಯಾದ ನಾಮವನ್ನು ಹಣೆ ಮೇಲೆ ಧರಿಸಿಕೊಳ್ಳುತ್ತಿದ್ದದ್ದು ಕಂಡುಬಂತು.

ADVERTISEMENT

ಬಿ.ಬಿ.ರಸ್ತೆಯಲ್ಲಿರುವ ಶನೈಶ್ವರ ಸ್ವಾಮಿ ದೇವಾಲಯ, ಕಂದವಾರ ಪೇಟೆಯಲ್ಲಿರುವ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನಗಳಿಗೆ ದಿನವೀಡಿ ಭಕ್ತರ ಭೇಟಿ ನಡದೇ ಇತ್ತು. ದೇವಾಲಯದಲ್ಲಿ ಬೆಳಿಗ್ಗೆ 5.30ರಿಂದ 6.30ರ ವರೆಗೆ ಅಭಿಷೇಕ ಮತ್ತು ಸುಪ್ರಭಾತ ಸೇವೆ ನಡೆದವು. ಕೋವಿಡ್‌ ಕಾರಣಕ್ಕೆ ಭಕ್ತರ ಸಂಖ್ಯೆ ಕಡಿಮೆ ಇತ್ತು. ತೀರ್ಥ ಪ್ರಸಾದ ವ್ಯವಸ್ಥೆ ಮಾಡಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.