ADVERTISEMENT

ಸಿದ್ಧರಾಮೇಶ್ವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 5:49 IST
Last Updated 7 ಜನವರಿ 2026, 5:49 IST
ಚಿಂತಾಮಣಿಯಲ್ಲಿ ಮಂಗಳವಾರ ನಡೆದ ಸಿದ್ದರಾಮೇಶ್ವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಚಿಂತಾಮಣಿಯಲ್ಲಿ ಮಂಗಳವಾರ ನಡೆದ ಸಿದ್ದರಾಮೇಶ್ವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು   

ಚಿಂತಾಮಣಿ: ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಭೋವಿ ಸಮುದಾಯವು ಸಂಯುಕ್ತವಾಗಿ ಜನವರಿ 14 ರಂದು ಸಿದ್ಧರಾಮೇಶ್ವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಸುದರ್ಶನಯಾದವ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಸಹಕಾರ ನೀಡಬೇಕು. ನಗರದ ಪ್ರವಾಸಿ ಮಂದಿರದಿಂದ ಸ್ಥಬ್ದಚಿತ್ರಗಳ ಮೆರವಣಿಗೆ ಆರಂಭವಾಗುತ್ತದೆ. ನಗರದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ಸಾಗಿ ವೇದಿಕೆಯ ಸ್ಥಳವಾದ ತಾಲ್ಲೂಕು ಪಂಚಾಯಿತಿಗೆ ಸೇರಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ತಹಶೀಲ್ದಾರ್ ತಿಳಿಸಿದರು.

ಎಸ್.ಎಸ್.ಎಲ್.ಸಿ 10 ಮತ್ತು ಪಿಯುಸಿ 10 ಹಾಗೂ ಸಮುದಾಯದಿಂದ 20 ವಿದ್ಯಾರ್ಥಿಗಳು ಸೇರಿ ಒಟ್ಟು 40 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಆ ದಿನ ಎಲ್ಲ ಸರ್ಕಾರಿ ಕಚೇರಿಗಳಿಗೆ ದೀಪಲಂಕಾರ ಮಾಡಬೇಕು. ಶಿಷ್ಟಾಚಾರಕ್ಕೆ ಅನುಗುಣವಾಗಿ ಕಾರ್ಯಕ್ರಮವನ್ನು ರೂಪಿಸಿ, ಆಹ್ವಾನ ಪತ್ರಗಳನ್ನು ವಿತರಿಸಬೇಕು. ಶಾಲೆಗಳಲ್ಲಿ ಸಿದ್ದರಾಮೇಶ್ವರ ಜಯಂತಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.