ADVERTISEMENT

13ರಂದು ಲೋಕ ಅದಾಲತ್

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 5:28 IST
Last Updated 10 ಡಿಸೆಂಬರ್ 2025, 5:28 IST
ಶಿಡ್ಲಘಟ್ಟದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಮಾತನಾಡಿದರು
ಶಿಡ್ಲಘಟ್ಟದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಮಾತನಾಡಿದರು   

ಶಿಡ್ಲಘಟ್ಟ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಇದೇ 13 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರಾಜಿ, ಸಂಧಾನದ ಮೂಲಕ ಪ್ರಕರಣಗಳ ಶೀಘ್ರ ವಿಲೇವಾರಿ ನಮ್ಮ ಆಶಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದರು.

ನಗರದ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕೌಟುಂಬಿಕ ವ್ಯಾಜ್ಯ, ಸಿವಿಲ್, ಹಣಕಾಸಿನ ವಿಚಾರ, ಬ್ಯಾಂಕ್‌ನಲ್ಲಿ ಸಾಲ ಪಡೆದ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ರಾಜ್, ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ರಾಜಿ ಮಾಡಿಕೊಂಡರೆ ಮಾನವ ಸಂಬಂಧ, ಮೌಲ್ಯಗಳು, ಶಾಂತಿ, ನೆಮ್ಮದಿಯ ವಾತಾವರಣ ಮೂಡಿ ಕಕ್ಷಿದಾರರ ಅಮೂಲ್ಯವಾದ ಸಮಯ ಮತ್ತು ಹಣ ಉಳಿಯುತ್ತದೆ. ರಾಜಿಗೆ ಯೋಗ್ಯವಾದ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಇಚ್ಛಿಸುವ ಕಕ್ಷಿದಾರರು ಸ್ವಯಂ ಪ್ರೇರಿತರಾಗಿ ತಮ್ಮ ವಕೀಲರ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ರಾಜಿ ಮಾಡಿಕೊಳ್ಳಬಹುದು ಎಂದರು. 

ADVERTISEMENT

ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ ಸಿ.ಎಸ್, ಸರ್ಕಾರಿ ಸಹಾಯಕ ಅಭಿಯೋಜಕ ಮೊಹಮ್ಮದ್ ಖಾಜಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.