ADVERTISEMENT

ಶಿಡ್ಲಘಟ್ಟ: ಬೀದಿಬದಿ ವ್ಯಾಪಾರಿಗಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 3:00 IST
Last Updated 26 ಫೆಬ್ರುವರಿ 2026, 3:00 IST
ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀದಿಬದಿ ವ್ಯಾಪಾರಿಗಳ ದಿನಾಚರಣೆ ಹಾಗೂ ಸಂಘದ 6ನೇ ವರ್ಷದ ಸಂಭ್ರಮಾಚರಣೆ 
ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀದಿಬದಿ ವ್ಯಾಪಾರಿಗಳ ದಿನಾಚರಣೆ ಹಾಗೂ ಸಂಘದ 6ನೇ ವರ್ಷದ ಸಂಭ್ರಮಾಚರಣೆ    

ಶಿಡ್ಲಘಟ್ಟ: ಇಲ್ಲಿನ ಕೋಟೆ ವೃತ್ತದಲ್ಲಿ ಬೀದಿಬದಿ ವ್ಯಾಪಾರಿಗಳ ದಿನಾಚರಣೆ ಮತ್ತು ಸಂಘದ 6ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಯಿತು. 

ಬೀದಿಬದಿ ವ್ಯಾಪಾರಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ. ರಂಗಸ್ವಾಮಿ ಮಾತನಾಡಿ, ‘ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸವಲತ್ತುಗಳು ಸಕಾಲದಲ್ಲಿ ಸಿಗಬೇಕಾದರೆ, ವ್ಯಾಪಾರಿಗಳಲ್ಲಿ ಜಾಗೃತಿ ಮೂಡಬೇಕಿದೆ’ ಎಂದರು. 

ಬಹುತೇಕ ಬೀದಿಬದಿ ವ್ಯಾಪಾರಿಗಳು ಅನಕ್ಷರಸ್ಥರಾಗಿದ್ದು, ಜಾಗೃತಿ ಕೊರತೆಯಿಂದ ಸರ್ಕಾರದ ಹಲವು ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳ ತಾಲ್ಲೂಕು ಸಂಘ ರಚನೆಯಾದ ಮೇಲೆ ಸಮಸ್ಯೆಗಳು ನಿವಾರಣೆಯಾಗುತ್ತಿವೆ ಎಂದರು. 

ADVERTISEMENT

ಮಹಿಳಾ ಘಟಕದ ರಾಜ್ಯ ಘಟಕದ ಅಧ್ಯಕ್ಷೆ ಕಾವ್ಯಶ್ರೀ, ಸಂಘದ ತಾಲ್ಲೂಕು ಅಧ್ಯಕ್ಷ ಶ್ರೀರಾಮ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ಸಿ.ಎಂ.ಬೈರೇಗೌಡ, ಸುಧಾ, ಡಾ.ಸತ್ಯನಾರಾಯಣರಾವ್, ವಿಸ್ಡಂ ನಾಗರಾಜ್, ಮಧುಲತಾ, ರವಿಪ್ರಕಾಶ್, ಪ್ರದೀಪ್, ಗೋಪಾಲ್, ಸುರೇಶ್, ತಿಮ್ಮರಾಯಪ್ಪ, ವೆಂಕಟರವಣಪ್ಪ, ಗೋವಿಂದಪ್ಪ, ಮಹೇಶ್, ಲಕ್ಷ್ಮಿದೇವಿ, ಮುನಿರತ್ನಮ್ಮ, ಪಾರ್ವತಮ್ಮ, ಪದ್ಮಮ್ಮ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.