
ಪ್ರಜಾವಾಣಿ ವಾರ್ತೆಚಿಕ್ಕಬಳ್ಳಾಪುರ: ನಗರದ ಬಿ.ಬಿ ರಸ್ತೆಯ ಎ.ಯು ಚಿನ್ನಾಭರಣ ಮಾರಾಟ ಮಳಿಗೆ ಶಟರ್ ಮುರಿದು ಕಳ್ಳರು 140 ಕೆ.ಜಿ ಬೆಳ್ಳಿ ದೋಚಿ ಪರಾರಿಯಾಗಿದ್ದರೆ. ಇದರ ಮೌಲ್ಯ ₹3 ಕೋಟಿ ಎಂದು ಅಂದಾಜಿಸಲಾಗಿದೆ.
ಸೋಮವಾರ ರಾತ್ರಿ ಅಂಗಡಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ಚಿನ್ನದ ಆಭರಣಗಳ ಲಾಕರ್ ಮುರಿಯಲು ಸಾಧ್ಯವಾಗದ ಕಾರಣ ಬೆಳ್ಳಿ ದೋಚಿದ್ದಾರೆ. ತಮ್ಮ ಮಾಹಿತಿ ದೊರೆಯಬಾರದು ಎಂದು ಸಿಸಿಟಿವಿ ಕ್ಯಾಮೆರಾ ಡಿವಿಆರ್ ಸಹ ಕೊಂಡೊಯ್ದಿದ್ದಾರೆ.
ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ‘ಪರಿಣತ ಕಳ್ಳರ ತಂಡ ಈ ಕೃತ್ಯ ನಡೆಸಿದಂತೆ ಕಾಣುತ್ತಿದೆ. ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.