ADVERTISEMENT

ಸೋನಿಯಾಗೆ ಮಹಿಳಾ ಸಂಘಟನೆಗಳ ಪತ್ರ: ಸಿದ್ದರಾಮಯ್ಯ, ತಂಡದ ಹೊಸ ಕಥೆ ಎಂದ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 11:15 IST
Last Updated 5 ಸೆಪ್ಟೆಂಬರ್ 2025, 11:15 IST
<div class="paragraphs"><p>ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ</p></div>

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ

   

ಚಿಕ್ಕಬಳ್ಳಾಪುರ: ‘ಸೋನಿಯಾ ಗಾಂಧಿ ಅವರಿಗೆ ಧರ್ಮಸ್ಥಳದ ಬಗ್ಗೆ ಏನು ಗೊತ್ತಿದೆ? ನನ್ನ ಮಗನನ್ನು ಪ್ರಧಾನಿ ಮಾಡಬೇಕು ಎನ್ನುವುದಷ್ಟೇ ಅವರ ತಲೆಯಲ್ಲಿದೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. 

ಧರ್ಮಸ್ಥಳದಲ್ಲಿ ಹಲವರ ಶವಗಳನ್ನು ಹೂಳಲಾಗಿದೆ. ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿರುವ ವಿಚಾರವಾಗಿ ಇಲ್ಲಿ ಶುಕ್ರವಾರ ವಿ.ಸೋಮಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ADVERTISEMENT

‘ಹೆಣ್ಣು ಮಕ್ಕಳಿಗೆ ಯಾರೊ ಹೇಳಿಕೊಟ್ಟು ಮಾಡಿಸಿರಬಹುದು. ಸಿದ್ದರಾಮಯ್ಯ ಮತ್ತು ಅವರ ತಂಡ ಹೊಸದ ಕಥೆಯಂತಿದೆ. ಡಿ.ಕೆ.ಶಿವಕುಮಾರ್ ಕುಮಾರ್ ಬುದ್ಧಿವಂತಿಕೆಗೆ ಬೇಸರ ಮಾಡಿಕೊಂಡಿರುವವರು ಹೀಗೆ ಮಾಡಿಸಿರಬಹುದು. ಇಂತಹದ್ದೆಲ್ಲವನ್ನೂ ಮಾಡುವುದೇ ಕಾಂಗ್ರೆಸ್‌ನವರ ಕುತಂತ್ರ ಎಂದರು.

ಸೋನಿಯಾ ಗಾಂಧಿ ಅವರ ಬಗ್ಗೆ ಅಪಾರ ಗೌರವವಿದೆ. ಒಳ್ಳೆಯವರು. ಅವರು ಯಾವ ಡಿ.ಕೆ.ಶಿವಕುಮಾರ್, ಯಾವ ಲಕ್ಷ್ಮಿ ಹೆಬ್ಬಾಳ್ಕರ್ ಎನ್ನುವ ಸ್ಥಿತಿಯಲ್ಲಿ ಇದ್ದಾರೆ. ನನ್ನ ಮಗ ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎನ್ನುವ ತವಕದಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.