ADVERTISEMENT

ಆಗ್ನೇಯ ಪದವೀಧರ ಕ್ಷೇತ್ರ: ನಿರುದ್ಯೋಗಿಗಳೇ ಹೆಚ್ಚು ನೋಂದಣಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 11:11 IST
Last Updated 5 ಜೂನ್ 2020, 11:11 IST
ಡಿ.ಟಿ.ಶ್ರೀನಿವಾಸ್
ಡಿ.ಟಿ.ಶ್ರೀನಿವಾಸ್   

ಶಿಡ್ಲಘಟ್ಟ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸದಸ್ಯತ್ವ ನೋಂದಣಿ ಮಾಡಿರುವವರಲ್ಲಿ ನಿರುದ್ಯೋಗಿಗಳೇ ಹೆಚ್ಚಿದ್ದಾರೆಎಂದು ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಪಕ್ಷದ ಟಿಕೆಟ್‌ ಆಕಾಂಕ್ಷಿ ಡಿ.ಟಿ.ಶ್ರೀನಿವಾಸ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರಗಳನ್ನು ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಬೇಕು ಎಂದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಇದುವರೆಗೆ 2,300 ಮಂದಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಸದಸ್ಯತ್ವ ನೋಂದಣಿ ಮಾಡಿಸಿದ್ದಾರೆ. ಅವರಲ್ಲಿ 1,336 ಮಂದಿಯ ಸದಸ್ಯತ್ವವನ್ನು ನಾನೇ ಮಾಡಿಸಿರುವೆ ಎಂದರು.

ADVERTISEMENT

ಮುಂದಿನ ದಿನಗಳಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಸ್ಪರ್ಧತ್ಮಕ ಪರೀಕ್ಷೆಗಳಿಗೆ ತರಬೇತಿ ಕೇಂದ್ರ ತೆರೆಯುವ ಉದ್ದೇಶವಿದೆ. ತಾಲ್ಲೂಕು ಕೇಂದ್ರಗಳಲ್ಲಿ ಉದ್ಯೋಗ ಮೇಳ ಆಯೋಜಿಸುವುದು, ವೇತನ ತಾರತಮ್ಯ ನಿವಾರಣೆಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದರು.

ನಿರಂತರವಾಗಿ ಮತದಾರರೊಂದಿಗೆ ಸಂಪರ್ಕದಲ್ಲಿದ್ದೇನೆ. ಪಕ್ಷ ನಿರಾಸೆ ಮಾಡುವುದಿಲ್ಲವೆಂಬ ಆಶಾಭಾವನೆ ಇದೆ ಎಂದರು.

ನಗರಸಭೆ ಸದಸ್ಯ ಮುನಿರಾಜು ಮಾತನಾಡಿ, ಸದ್ಯ ಡಿ.ಟಿ ಶ್ರೀನಿವಾಸ್ ಅವರು ರಾಜ್ಯ ಗೊಲ್ಲ ಸಂಘದ ಅಧ್ಯಕ್ಷರಾಗಿದ್ದು, ರಾಜ್ಯ ಹಿಂದುಳಿದ ವರ್ಗ ಬಿಜೆಪಿ ಮೋರ್ಚಾ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ ಎಂದರು.

ರಾಜ್ಯ ಯಾದವ ಸಂಘದ ಕಾರ್ಯದರ್ಶಿ ಬಿ.ಶ್ರೀನಿವಾಸ್, ತಾಲ್ಲೂಕು ಉಪಾಧ್ಯಕ್ಷ ಟಿ.ಕೆ.ನಟರಾಜ್, ನಗರಸಭೆ ಸದಸ್ಯ ನಾರಾಯಣಸ್ವಾಮಿ, ಮುನಿರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.